ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿಯನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಮಾಜಿ ಸಚಿವ ವಿನಯ್ ಕುಲಕರ್ಣಿಯನ್ನು ಅವರ ನಿವಾಸದಲ್ಲೇ ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ಉಪನಗರ ಠಾಣೆಗೆ ಕರೆದೊಯ್ದಿದ್ದಾರೆ. ಠಾಣೆಯಲ್ಲಿ ಮಾಜಿ ಸಚಿವರ ವಿಚಾರಣೆ ನಡೆಸಲಿದ್ದಾರೆ.
![CBI detained to former minister, CBI detained to former minister Vinay Kulkarni, Vinay Kulkarni detained, Vinay Kulkarni detained news, Vinay Kulkarni news, Yogesh Gowda Murder case, Yogesh Gowda Murder case news, ಮಾಜಿ ಸಚಿವ ಸಿಬಿಐ ವಶಕ್ಕೆ, ಮಾಜಿ ಸಚಿವ ವಿನಯ ಕುಲಕರ್ಣಿ ಸಿಬಿಐ ವಶಕ್ಕೆ, ವಿನಯ ಕುಲಕರ್ಣಿ ವಶ, ವಿನಯ ಕುಲಕರ್ಣಿ ವಶ ಸುದ್ದಿ, ವಿನಯ ಕುಲಕರ್ಣಿ ಸುದ್ದಿ,](https://etvbharatimages.akamaized.net/etvbharat/prod-images/9435788_yogesh.jpg)
ಯೋಗೀಶ್ ಗೌಡ ಹತ್ಯೆ ವಿಚಾರದಲ್ಲಿ ವಿನಯ್ ಕುಲಕರ್ಣಿ ಅವರ ಹೆಸರು ತಳುಕು ಹಾಕಿಕೊಂಡಿತ್ತು. ಈಗಾಗಲೇ ಯೋಗೇಶ್ ಗೌಡ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನೇಕ ಜನರನ್ನು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದ್ದು, ತನಿಖೆ ಮುಂದುವರಿಸಿದ್ದಾರೆ.