ಧಾರವಾಡ: ಹೆಬ್ಬಳ್ಳಿ ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದ ಸಂತೋಷ ಸವದತ್ತಿಯನ್ನು ಡಿ. 4ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿಬೇಕೆಂದು, 1ನೇ ಹೆಚ್ಚುವರಿ ಜೆಎಂಎಫ್ಸಿ ನ್ಯಾಯಾಲಯ ಆದೇಶಿಸಿದೆ.
ಸಂತೋಷ ಸವದತ್ತಿ ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಸಂದೀಪ ಸವದತ್ತಿ ಸಹೋದರನಾಗಿದ್ದು, ಸಂತೋಷ ಸವದತ್ತಿಯನ್ನು ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಏಳನೇ ಆರೋಪಿ ಎಂದು ಪರಿಗಣಿಸಿ ಸಿಬಿಐ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.
ನ. 21 ರಂದು ಸಿಬಿಐ ವಿಚಾರಣೆಗೆ ಮಧ್ಯಂತರ ತಡೆಯಾಜ್ಞೆ ನೀಡಿ ಬೆಂಗಳೂರು ಹೈಕೋರ್ಟ್ ಆದೇಶ ನೀಡಿತ್ತು. ಆದಾಗ್ಯೂ ನೋಟಿಸ್ ನೀಡಿ ವಿಚಾರಣೆ ನಡೆಸುತ್ತಿರುವುದು ಏಕೆ ಎಂದು ಆರೋಪಿ ಪರ ವಕೀಲ ಅಶೋಕ ಶಿಂಧೆ ವಾದ ಮಂಡಿಸಿದರು. ಹೈಕೋರ್ಟ್ ತಡೆಯಾಜ್ಞೆ ನೀಡಿರುವ ಪ್ರತಿ ಹಾಜರುಪಡಿಸಲು ನ್ಯಾಯಾಧೀಶರು ಸೂಚಿಸಿದ್ದಾರೆ. ಆದೇಶ ಪ್ರತಿ ಸಿಗದ ಹಿನ್ನೆಲೆಯಲ್ಲಿ ಆರೋಪಿಯನ್ನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಸದ್ಯಕ್ಕೆ ಸಿಬಿಐ ಅಧಿಕಾರಿಗಳು ಸದ್ಯಕ್ಕೆ ವಿಚಾರಣೆ ಕೈಬಿಟ್ಟಂತಾಗಿದೆ.