ಧಾರವಾಡ: ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಪರ ವಕೀಲರು ಜಾಮೀನಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನ ಹಿನ್ನೆಲೆ ಮಾಜಿ ಸಚಿವರ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದು, ಕೋವಿಡ್ ಹಿನ್ನೆಲೆ ವಿಳಂಬವಾಗುತ್ತಿದೆ ಎನ್ನಲಾಗುತ್ತಿದೆ.
ಹುಬ್ಬಳ್ಳಿ ಸಿಎಆರ್ ಮೈದಾನದಲ್ಲಿ ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಸೋಮವಾರ ವಿನಯ್ ಕುಲಕರ್ಣಿ ಸಿಬಿಐ ಕಸ್ಟಡಿ ಅಂತ್ಯ ಹಿನ್ನೆಲೆ ಕೋರ್ಟ್ಗೆ ಹಾಜರು ಪಡಿಸಬೇಕಿತ್ತು. ಆದ್ರೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿ ನವೆಂಬರ್ 23ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಸೋಮವಾರ ಸಂಜೆಯೇ ವಿನಯ್ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಜಿಲ್ಲಾ ನ್ಯಾಯಾಲಯದಲ್ಲಿ ಇಂದು ವಿಚಾರಣೆ ನಡೆಯುವ ಸಾಧ್ಯತೆಯಿದೆ.
ಹೈಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಿದ ಟಿಂಗರಿಕರ್...
ಯೋಗೇಶ್ ಹತ್ಯೆ ಪ್ರಕರಣದಲ್ಲಿ ತನಿಖಾಧಿಕಾರಿಯಾಗಿದ್ದ ಚೆನ್ನಕೇಶವ ಟಿಂಗರಿಕರ್ ಹೈಕೋರ್ಟ್‌ಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಚೆನ್ನಕೇಶವ ಟಿಂಗರಿಕರ್ ಯೋಗೇಶ್ ಗೌಡ ಹತ್ಯೆಯ ತನಿಖಾಧಿಕಾರಿಯಾಗಿದ್ದರು. ಉಪನಗರ ಠಾಣೆಯ ಇನ್ಸ್ಪೆಕ್ಟರ್ ಸಹ ಕಾರ್ಯ ನಿವರ್ಹಿಸಿದ್ದರು. ಬಂಧನದ ಭೀತಿಯಿಂದ ಜಿಲ್ಲಾ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಕೆಲ ದಿನಗಳ ಹಿಂದಷ್ಟೇ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯ ತಿರಸ್ಕರಿಸಿತ್ತು. ಇದೀಗ ಚೆನ್ನಕೇಶವ ಟಿಂಗರಿಕರ್ ಧಾರವಾಡ ಹೈಕೋರ್ಟ್ ಮೊರೆ ಹೋಗಿದ್ದಾರೆ.