ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆಯಾಗಿದೆ.
ಇಂದು ಜಾಮೀನು ಅರ್ಜಿ ವಿಚಾರಣೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯ, ವಿಚಾರಣೆಯನ್ನು ಡಿ. 9ಕ್ಕೆ ಮುಂದೂಡಿದೆ.
ಜಾಮೀನು ಕೋರಿ ವಿನಯ್ ಕುಲಕರ್ಣಿ ಪರ ವಕೀಲರು ವಾದ ಮಂಡಿಸಿದರು. ಮಾಜಿ ಸಚಿವ ವಿನಯ್ ಕುಲಕರ್ಣಿ ಈಗಾಗಲೇ ಬೆಳಗಾವಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.