ಧಾರವಾಡ: ಜಿ. ಪಂ. ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದ ತನಿಖಾಧಿಕಾರಿ ಚನ್ನಕೇಶವ ಟಿಂಗರಿಕರ್ ಅವರಿಗೆ ಧಾರವಾಡ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಸಿಬಿಐನಿಂದ ಬಂಧನದ ಭೀತಿಯಲ್ಲಿದ್ದ ಟಿಂಗರಿಕರ್ ಧಾರವಾಡ ಹೈಕೋರ್ಟ್ ಗೆ ನವೆಂಬರ್ 9 ರಂದು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಎರಡು ಕಡೆ ವಾದ ವಿವಾದ ಆಲಿಸಿದ ನ್ಯಾಯಾಲಯ ಷರತ್ತುಗಳನ್ನು ವಿಧಿಸಿ, ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಈ ಹಿಂದೆ ಟಿಂಗರಿಕರ್ ಧಾರವಾಡ ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿತ್ತು. ಅದಾದ ಬಳಿಕ ಅವರು ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು.