ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣವನ್ನು ಸಿಬಿಐ ಕೋರ್ಟ್‌ನಿಂದ ಜನ ಪ್ರತಿನಿಧಿ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ.
ಬೆಂಗಳೂರಿನಲ್ಲಿರುವ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರಕರಣವನ್ನು ವರ್ಗಾವಣೆ ಮಾಡಲಾಗಿದೆ. ವಿನಯ್ ಕುಲಕರ್ಣಿ ಪರ ವಕೀಲರ ಕೋರಿಕೆ ಮೇರೆಗೆ ಪ್ರಕರಣವನ್ನು ವರ್ಗಾಯಿಸಲಾಗಿದೆ ಎನ್ನಲಾಗುತ್ತಿದೆ.
ವಿನಯ್ ಪರ ವಕೀಲರ ಕೋರಿಕೆಗೆ ಸಿಬಿಐ ಆಕ್ಷೇಪ ಸಲ್ಲಿಸಿದ ಹಿನ್ನೆಲೆಯಲ್ಲಿ ವಕೀಲರ ಕೋರಿಕೆಗೆ ಮಾನ್ಯತೆ ಸಿಕ್ಕಿದೆ. ಇನ್ನು ಮುಂದೆ ಪ್ರಕರಣದ ವಿಚಾರಣೆ ಬೆಂಗಳೂರಿನಲ್ಲೇ ನಡೆಯಲಿದೆ.