ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕಣರದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜಾಮೀನು ನೀಡಲು ಕೋರ್ಟ್ ನಿರಾಕರಿಸಿದೆ.
ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯ ವಿನಯ್ ಜಾಮೀನು ತಿರಸ್ಕಾರ ಮಾಡಿದೆ. ಇದರಿಂದ ಮಾಜಿ ಸಚಿವ ವಿನಯ್ ಕುಲಕರ್ಣಿ ಪರ ವಕೀಲರು ಹೈಕೋರ್ಟ್ ಮೊರೆ ಹೋಗುವ ಸಾಧ್ಯತೆಯಿದೆ.
ವಾದ ಪ್ರತಿ ವಾದ ಮಂಡಿಸಿದ ಬಳಿಕ ಕೋರ್ಟ್ ಇಂದು ತೀರ್ಪು ಕಾಯ್ದಿರಿಸಿತ್ತು. ಸಂಜೆ ವೇಳೆಗೆ ತೀರ್ಪು ಘೋಷಿಸಿದ ಕೋರ್ಟ್ ವಿನಯ್ ಜಾಮೀನು ಅರ್ಜಿ ತಿರಸ್ಕೃತಗೊಳಿಸಿದೆ. ಇದರಿಂದ ವಿನಯ್ ಕುಲಕರ್ಣಿ ಅವರಿಗೆ ಜೈಲೇ ಗತಿಯಾಗಿದೆ. ವಿನಯ್ ಕುಲಕರ್ಣಿ ಈಗಾಗಲೇ ಬೆಳಗಾವಿ ಹಿಂಡಲಗಾ ಜೈಲಿನಲ್ಲಿದ್ದಾರೆ.
ಇದನ್ನೂ ಓದಿ...ಯೋಗೀಶ್ ಗೌಡ ಹತ್ಯೆ ಪ್ರಕರಣ : ವಿನಯ್ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ!