ಧಾರವಾಡ: ಮನೆಯ ಮಾಲೀಕರು ಯಾರೂ ಇಲ್ಲದ ವೇಳೆ ಬಾಡಿಗೆಗಿದ್ದ ಯುವಕನೊರ್ವ ನೇಣಿಗೆ ಶರಣಾಗಿರುವ ಘಟನೆ ನಗರದ ಕಮಲಾಪುರ ಬಡಾವಣೆಯಲ್ಲಿ ನಡೆದಿದೆ.
ಸಂಜು ಹುಯಿಲಗೋಳ (೩೦) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಈತ ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ಸಂಜು ಕಮಲಾಪುರದಲ್ಲಿನ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ.
ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ, ಮೃತ ದೇಹವನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.