ETV Bharat / state

ಪ್ರೀತಿಸಲು ನಿರಾಕರಿಸಿದ ಯುವತಿ ಕೊಲೆ ಯತ್ನ ಪ್ರಕರಣ: ಆರೋಪಿಗೆ ಶಿಕ್ಷೆ ಪ್ರಕಟಿಸಿದ ಹುಬ್ಬಳ್ಳಿ ನ್ಯಾಯಾಲಯ - Hubli

ಪ್ರೀತಿಸಲು‌ ನಿರಾಕರಿಸಿದ ಯುವತಿಯ ಮೇಲೆ ಚಾಕುವಿನಿಂದ ಇರಿದು ಕೊಲೆ ಮಾಡಲು ಯತ್ನಿಸಿ, ಕೊನೆಗೆ ತಾನೂ ಆತ್ಮಹತ್ಯೆಗೆ ಪ್ರಯತ್ನಿಸಿದ ಯುವಕನಿಗೆ ಹುಬ್ಬಳ್ಳಿಯ 5ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

Hubli court sentenced the accused
ಯುವತಿ ಕೊಲೆ ಯತ್ನ ಪ್ರಕರಣ: ಆರೋಪಿಗೆ ಶಿಕ್ಷೆ ಪ್ರಕಟಿಸಿದ ಹುಬ್ಬಳ್ಳಿ ನ್ಯಾಯಾಲಯ
author img

By

Published : Mar 10, 2021, 9:10 AM IST

ಹುಬ್ಬಳ್ಳಿ: ಪ್ರೀತಿಸಲು‌ ನಿರಾಕರಿಸಿದ ಯುವತಿಯ ಮೇಲೆ ಚಾಕುವಿನಿಂದ ಇರಿದು ಕೊಲೆ ಮಾಡಲು ಯತ್ನಿಸಿ, ಬಳಿಕ ತಾನೂ ಆತ್ಮಹತ್ಯೆಗೆ ಪ್ರಯತ್ನಿಸಿದ ಯುವಕನಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಪ್ರಕರಣದ ಹಿನ್ನೆಲೆ:

ವೆಂಕಟೇಶ್ವರ ‌ನಗರದ ಮೇಘನಾ ಚಂದ್ರಶೇಖರ ಜಾಳಗಿ ಎಂಬುವರಿಗೆ ರಾಯಚೂರು ಮೂಲದ ಅಭಿನವ ಕುಲಕರ್ಣಿ ಎಂಬ ಯುವಕ ಫೋನ್ ಹಾಗೂ ಮೆಸೇಜ್ ಮಾಡಿ ತನ್ನ ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ. ಯುವತಿ ಪ್ರೀತಿ ಮಾಡಲು ಒಪ್ಪದ್ದರಿಂದ ಆರೋಪಿ ಸಿಟ್ಟಿನಿಂದ 2015ರ‌ ನ.29 ರಂದು ಹುಬ್ಬಳ್ಳಿ ಗೋಕುಲ ರೋಡ್​ ಅರ್ಬನ್ ಓಯಾಸಿಸ್ ಮಾಲ್​ನಲ್ಲಿ ಯುವತಿಗೆ ಚಾಕುವಿನಿಂದ ಕುತ್ತಿಗೆ ಹಾಗೂ ಹೊಟ್ಟೆಗೆ ಇರಿದು ಕೊಲೆ ಮಾಡಲು ಪ್ರಯತ್ನಿಸಿದ್ದ. ಅಲ್ಲದೇ ತಾನೂ ಸಹ ಅದೇ ಚಾಕುವಿನಿಂದ ತನ್ನ ಕುತ್ತಿಗೆ ಹಾಗೂ ಹೊಟ್ಟೆಗೆ ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ. ಈ ಬಗ್ಗೆ ಯುವತಿ ದೂರು ನೀಡಿದ್ದಳು.

ಹುಬ್ಬಳ್ಳಿ ಗೋಕುಲ ರೋಡ್​ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆಃ 140/2015 ಕಲಂ: 307, 354 (ಡಿ) (1), 309 ಐಪಿಸಿ ಅಡಿ ಆಗ ಕರ್ತವ್ಯದಲ್ಲಿದ್ದ ಗೋಕುಲ ರೋಡ್​ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್​ಪೆಕ್ಟರ್​ ಎಸ್. ಕೆ. ಕುರಗೋಡಿ ಪ್ರಕರಣ ದಾಖಲಿಸಿ ತನಿಖೆ ಕೈಕೊಂಡು ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಆರೋಪಿ ಮೇಲೆ ಸಾಕ್ಷಾಧಾರಗಳನ್ನು ಸಂಗ್ರಹಿಸಿ ಸದರಿಯವನ ಮೇಲೆ ದಿನಾಂಕ 23-03-2016 ರಂದು ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು. ಸದರಿ ಪ್ರಕರಣವು ಹುಬ್ಬಳ್ಳಿಯ 5ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಚೌಕಶಿ ನಡೆದು ಆರೋಪಿ ಮೇಲೆ ಆರೋಪ ಸಾಬೀತಾದ ಹಿನ್ನೆಲೆ ದಿನಾಂಕ: 08-03-2021 ರಂದು ನ್ಯಾಯಾಧೀಶರಾದ ಗಂಗಾಧರ ಕೆ.ಎನ್ ಇವರು ಆರೋಪಿಗೆ

1. ಕಲಂ: 307 ಐಪಿಸಿ ಅಡಿ 7 ವರ್ಷ ಕಠಿಣ ಶಿಕ್ಷೆ ಒಂದು ಲಕ್ಷ ರೂಪಾಯಿ ಜುಲ್ಮಾನೆ, ಜುಲ್ಮಾನೆ ಕಟ್ಟದಿದ್ದಲ್ಲಿ ಎರಡು ವರ್ಷ ಸಾದಾ ಶಿಕ್ಷೆ.

2. ಕಲಂ: 354 (ಡಿ) (1) ಐಪಿಸಿ ಅಡಿಯಲ್ಲಿ ಒಂದೂವರೆ ವರ್ಷ ಕಠಿಣ ಶಿಕ್ಷೆ ಹಾಗೂ 10 ಸಾವಿರ ರೂಪಾಯಿ ದಂಡ, ದಂಡ ತುಂಬದಿದ್ದಲ್ಲಿ 6 ತಿಂಗಳು ಸಾದಾ ಶಿಕ್ಷೆ.

3. ಕಲಂ: 309 ಐಪಿಸಿ ಅಡಿಯಲ್ಲಿ 6 ತಿಂಗಳು ಕಠಿಣ ಶಿಕ್ಷೆ ಹಾಗೂ 5 ಸಾವಿರ ರೂಪಾಯಿ ದಂಡ, ದಂಡ ತುಂಬದಿದ್ದಲ್ಲಿ 1 ತಿಂಗಳು ಸಾದಾ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ಯುವತಿ ಪರವಾಗಿ ಸರ್ಕಾರಿ‌ ಅಭಿಯೋಜಕಿ ಸುಮಿತ್ರಾ ಅಂಚಟಗೇರಿ ವಾದ ಮಂಡಿಸಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.