ETV Bharat / state

ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ನಿರ್ಮಾಣಕ್ಕೆ ವಿರೋಧ: ಯುವತಿ ಏಕಾಂಗಿ ಪ್ರತಿಭಟನೆ - Environmental pollution

ಹುಬ್ಬಳ್ಳಿ-ಅಂಕೋಲಾ ರೈಲ್ವೆ ಮಾರ್ಗ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಯುವತಿಯೊಬ್ಬಳು ಏಕಾಂಗಿಯಾಗಿ ಪ್ರತಿಭಟನೆ ನಡೆಸುತ್ತಿದ್ದಾಳೆ.

Young woman protests against Hubli-Ankola railway line
ಯುವತಿ ಪ್ರತಿಭಟನೆ
author img

By

Published : Jul 13, 2020, 4:39 PM IST

ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದ ಜನರ ಬಹುದಿನಗಳ ಬೇಡಿಕೆಯಾದ ಹುಬ್ಬಳ್ಳಿ-ಅಂಕೋಲಾ ರೈಲ್ವೆ ಮಾರ್ಗ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ ಯುವತಿಯೊಬ್ಬಳು, ಯೋಜನೆ ಕೈ ಬಿಡಬೇಕು ಎಂದು ಆಗ್ರಹಿಸಿ ಚೆನ್ನಮ್ಮ ವೃತ್ತದಲ್ಲಿ ಏಕಾಂಗಿಯಾಗಿ ಪ್ರತಿಭಟನೆ ನಡೆಸುತ್ತಿದ್ದಾಳೆ.

ಪ್ರತಿಭಟನೆ ನಡೆಸುತ್ತಿರುವ ಹುಬ್ಬಳ್ಳಿಯ ಬಿವಿಬಿ ಮಹಾವಿದ್ಯಾಲಯದ ಎಂ.ಟೆಕ್ ವಿದ್ಯಾರ್ಥಿನಿ ಕೀರ್ತಿ ಚೆನ್ನರೆಡ್ಡಿ ಸುದ್ದಿಗಾರರೊಂದಿಗೆ ಮಾತನಾಡಿ, ಲಾಕ್​​​ಡೌನ್ ಹಿನ್ನೆಲೆಯಲ್ಲಿ ಪರಿಸರ ಸಾಕಷ್ಟು ಪ್ರಮಾಣದಲ್ಲಿ ಸಂಪದ್ಭರಿತವಾಗಿದೆ. ಈ ಕಾಮಗಾರಿಯಿಂದ ಎರಡೂವರೆ ಲಕ್ಷಕ್ಕೂ ಅಧಿಕ ಮರಗಳನ್ನು ಕತ್ತರಿಸಬೇಕಾಗುತ್ತದೆ. ಹೀಗಾಗಿ ಯಾವುದೇ ಕಾರಣಕ್ಕೂ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಬೇಡ ಎಂದರು.

ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ ಯುವತಿ

ದಿನದಿಂದ ದಿನಕ್ಕೆ ಪರಿಸರ ಮಾಲಿನ್ಯ ಹೆಚ್ಚುತ್ತಿದೆ. ಆದ್ದರಿಂದ ಅರಣ್ಯ ಹಾಳು ಮಾಡಿ ರೈಲು ಓಡಿಸುವ ಯೋಜನೆ ಬೇಡ. ಇದರಿಂದ ಅರಣ್ಯ ಸಂಪತ್ತಿಗೆ ಸಾಕಷ್ಟು ಧಕ್ಕೆಯಾಗುತ್ತದೆ ಎಂದ ಅವರು, ಈ ಯೋಜನೆ ಕೈ ಬಿಡುವವರೆಗೂ ನಿರಂತರ ಹೋರಾಟ ಮಾಡುತ್ತೇನೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.