ಹುಬ್ಬಳ್ಳಿ/ದಾವಣಗೆರೆ: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಹುಬ್ಬಳ್ಳಿ, ದಾವಣಗೆರೆಯಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಕಾರ್ಯಕರ್ತರು ಹುಬ್ಬಳ್ಳಿಯ ಅಂಬೇಡ್ಕರ್ ಸರ್ಕಲ್ನಿಂದ ಚನ್ನಮ್ಮ ವೃತ್ತದವರೆಗೆ ಬೃಹತ್ ಪ್ರತಿಭಟನೆ ನಡೆಸಿದರು. ದಾವಣಗೆರೆಯಲ್ಲಿಯೂ ಮಹಾನಗರ ಪಾಲಿಕೆಯಿಂದ ಆರಂಭವಾದ ಪ್ರತಿಭಟನೆ ಅರುಣ ವೃತ್ತದವರೆಗೂ ತಲುಪಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಕೇಂದ್ರ, ರಾಜ್ಯ ಸರ್ಕಾರಗಳು ನಿರಂತರ ಬೆಲೆ ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಕಿಸೆಗೆ ಕೈ ಹಾಕಿ, ಬಡವರನ್ನು ಸಂಕಷ್ಟಕ್ಕೆ ದೂಡುತ್ತಿದೆ. ದೇಶವನ್ನು ಕೊಳ್ಳೆ ಹೊಡೆಯುತ್ತಿರುವ ಪಿಕ್ ಪಾಕೆಟ್ ಸರ್ಕಾರ ಆಡಳಿತ ನಡೆಸುತ್ತಿದೆ ಎಂದು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಯುವ ಘಟಕದ ರಾಜ್ಯ ಅಧ್ಯಕ್ಷ ಮಹ್ಮದ್ ನಲಪಾಡ್ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: ಯುವ ಕಾಂಗ್ರೆಸ್ನಿಂದ ಗ್ಯಾಸ್ ಸಿಲಿಂಡರ್ಗೆ ಶ್ರದ್ಧಾಂಜಲಿ.. ನಡುರಸ್ತೆಯಲ್ಲಿ ಚಿತ್ರಾನ್ನ ತಯಾರಿಸಿ ಜನರಿಗೆ ಹಂಚಿಕೆ..
ದಾವಣಗೆರೆಯಲ್ಲೂ ಕೇಂದ್ರ ಸರ್ಕಾರ, ಪ್ರಧಾನಿ ಮೋದಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು. ಅಣುಕು ಶವ ಯಾತ್ರೆ ಮಾಡಿ ಯುವ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.