ಹುಬ್ಬಳ್ಳಿ: ಕಲಘಟಗಿ ತಾಲೂಕಿನ ಮಿಶ್ರಿಕೋಟಿ ಗ್ರಾಮದ ಕಿಲೆ ಓಣಿಯಲ್ಲಿ ಯುವಕರ ಬಳಗದ ವತಿಯಿಂದ ಕೊರೊನಾ ವಾರಿಯರ್ಸ್‌ಗಳಿಗೆ ಸನ್ಮಾನ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ಮಿಶ್ರಿಕೋಟಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಮತ್ತು ಸಿಬ್ಬಂದಿ ವರ್ಗ, ಆಶಾ ಕಾರ್ಯಕರ್ತೆಯರು, ಪೊಲೀಸ್ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರಿಗೆ ಸನ್ಮಾನ ಮಾಡಲಾಯಿತು.
ನಂತರ ಮಾತನಾಡಿದ ಗ್ರಾಮ ಪಂಚಾಯಿತಿ ಸದಸ್ಯ ಸುರೇಶ ಬೋವಿ ಈ ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಗೆ ಸನ್ಮಾನಿಸಿದ್ದು, ಅತ್ಯಂತ ಸಂತಸದ ವಿಚಾರ. ಸ್ತ್ರೀ ಎಂದರೆ ಶಕ್ತಿ, ಆ ಮಾಹಾಶಕ್ತಿಯೆ ಆಶಾ ಕಾರ್ಯಕರ್ತೆಯಾಗಿದ್ದಾರೆ. ಇಂದು ನಮ್ಮ ದೇಶದಲ್ಲಿ ನಿರಂತರ ಕೆಲಸ ಮಾಡುತ್ತಿರುವ ವೈದ್ಯಾಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರ ಕಾರ್ಯವನ್ನು ಗುರುತಿಸಿ ಪ್ರೋತ್ಸಾಹ ನೀಡುತ್ತಿರುವುದು ಹೆಮ್ಮೆಯ ವಿಚಾರ ಎಂದರು.