ಬೆಂಗಳೂರು: ನಗರದ ವಿವಿಧೆಡೆ ಸಕ್ರಿಯವಾಗಿದ್ದ 17 ಮಂದಿ ಆರೋಪಿಗಳನ್ನು ಬಂಧಿಸಿರುವ ಪೂರ್ವ ವಿಭಾಗದ ಪೊಲೀಸರು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಮೂರು ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ 79 ಪ್ರಕರಣಗಳಿಗೆ ಸಂಬಂಧಿಸಿದಂತೆ ಶಾಹೀದ್ ಅಪ್ರೀದಿ, ಶಾಹೀದ್ ಪಾಷಾ, ಮಹ್ಮದ್ ಮತೀನ್, ಅಜಯ್ ಸೇರಿದಂತೆ 17 ಆರೋಪಿಗಳನ್ನು ಬಂಧಿಸಲಾಗಿದ್ದು, 79 ದ್ವಿಚಕ್ರ ವಾಹನಗಳನ್ನ ವಶಕ್ಕೆ ಪಡೆಯಲಾಗಿದೆ.
ಹೆಣ್ಣೂರು, ಪುಲಿಕೇಶಿನಗರ, ಕೆಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೆಚ್ಚು ಸಕ್ರಿಯವಾಗಿದ್ದ ಆರೋಪಿಗಳು ಹೆಚ್ಚು ಡಿಯೋ ಸ್ಕೂಟರ್ ಅನ್ನೇ ಟಾರ್ಗೆಟ್ ಮಾಡುತ್ತಿದ್ದರು. ಸದ್ಯ ಆರೋಪಿಗಳನ್ನು ಬಂಧಿಸಲಾಗಿದ್ದು, ಬರೋಬ್ಬರಿ 50 ಲಕ್ಷ ರೂ. ಮೌಲ್ಯದ ವಿವಿಧ ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೂರ್ವ ವಿಭಾಗದ ಡಿಸಿಪಿ ಭೀಮಾಶಂಕರ್ ಗುಳೇದ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಹಿಂದೂ, ಮುಸ್ಲಿಂ ಸಂಘಟನೆ ಪ್ರಮುಖರ ಗೈರಿನಲ್ಲಿ ಶಾಂತಿ ಸಭೆ : ಹಲವು ವಿಚಾರಗಳ ಚರ್ಚೆ