ಗದಗ: ನಗರದಲ್ಲಿ ಇಂದು ಮತ್ತೆ ಇಬ್ಬರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 180ಕ್ಕೆ ಏರಿಕೆಯಾಗಿದೆ.
ನಗರದಲ್ಲಿ ಇಂದು 9 ಕೊರೊನಾ ಸೋಂಕಿತರು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, ಈವರೆಗೆ 69 ಸೋಂಕಿತರು ಗುಣಮುಖ ಹೊಂದಿ ಬಿಡುಗಡೆಯಾಗಿದ್ದಾರೆ. 116 ಸಕ್ರಿಯ ಪ್ರಕರಣಗಳಿದ್ದು, ಇದರಲ್ಲಿ ನಾಲ್ವರು ಸೋಂಕಿನಿಂದ ಮೃತಪಟ್ಟಿದ್ದಾರೆ.
ಇನ್ನು ಇಂದಿನ ಸೋಂಕಿತರು 33 ವರ್ಷದ (P-16612) ಪುರುಷನಿಗೆ ಧಾರವಾಡ ಮತ್ತು ಕೊಪ್ಪಳ ಜಿಲ್ಲೆಯ ಪ್ರಯಾಣದಿಂದ ಸೋಂಕು ತಗುಲಿದೆ. 28 ವರ್ಷದ (P-16613) ಪುರುಷನಿಗೆ ಮದ್ಯಪ್ರದೇಶದ ಪ್ರವಾಸ ಹಿನ್ನೆಲೆ ಸೋಂಕು ತಗುಲಿದೆ. ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸುಂದರೇಶ್ ಬಾಬು ಎಂ ತಿಳಿಸಿದ್ದಾರೆ.