ಗದಗ: ಇಂದು ಮತ್ತೆ ಹೊಸದಾಗಿ 31 ಜನರ ಮೇಲೆ ನಿಗಾ ವಹಿಸಲಾಗಿದೆ. ಇದುವರೆಗೂ ಒಟ್ಟು 451 ಜನರ ಮೇಲೆ ನಿಗಾ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
28 ದಿನಗಳ ಕ್ವಾರಂಟೈನ್ ಅವಧಿ ಪೂರೈಸಿದವರು 132 ಜನರಿದ್ದಾರೆ. ಮನೆಯಲ್ಲಿಯೇ ಪ್ರತ್ಯೇಕ ನಿಗಾದಲ್ಲಿ 303 ಜನರಿದ್ದಾರೆ. ಇನ್ನು ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ನಿಗಾದಲ್ಲಿರುವವರು 15 ಜನರಿದ್ದಾರೆ. 298 ಜನರ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಇದರಲ್ಲಿ ಇಂದು ಹೊಸದಾಗಿ 32 ಜನರ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಒಟ್ಟು 202 ಜನರ ಮಾದರಿಗಳು ನಕಾರಾತ್ಮಕವಾಗಿವೆ. 95 ಜನರ ವರದಿ ಬರಲು ಬಾಕಿ ಇದೆ. ಪಿ-166 ಪ್ರಕರಣದ ಪ್ರಾಥಮಿಕ ಸಂಪರ್ಕದಲ್ಲಿದ್ದ 82 ಜನರನ್ನು ಗುರುತಿಸಲಾಗಿದ್ದು, ಇವರ ಮಾದರಿಗಳು ನಕಾರಾತ್ಮಕವಾಗಿವೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಪಿ-166 ಪ್ರಕರಣ ಒಂದು ಕೋವಿಡ್-19 ಎಂದು ಧೃಡಪಟ್ಟಿತ್ತು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.