ETV Bharat / state

ಕಾಳಸಂತೆಯಲ್ಲಿ ರೆಮ್ಡಿಸಿವಿರ್ ಮಾರಾಟ: ನಾಲ್ವರು ಅಂದರ್​​

ರೆಮ್ಡಿಸಿವಿರ್​​ಅನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಬಂಧಿಸಲಾಗಿದೆ. 48,860 ಮೌಲ್ಯದ 14 ರೆಮ್ಡಿಸಿವಿರ್​​ ವಶಪಡಿಸಿಕೊಳ್ಳಲಾಗಿದೆ. ಆರೋಪಿತರು ರೂ. 30 ಸಾವಿರದಂತೆ(1 ರೆಮ್ಡಿಸಿವಿರ್​) ರೂ. 4,20,000 ಲೆಕ್ಕಾಚಾರದಲ್ಲಿ ಮಾರಾಟ ಮಾಡಲು ಸಂಚು ರೂಪಿಸಿದ್ದರೆಂದು ವಿಚಾರಣೆ ವೇಳೆ ತಿಳಿದು ಬಂದಿದೆ.

yathish n
ಜಿಲ್ಲಾ ಪೊಲೀಸ್​​ ವರಿಷ್ಠಾಧಿಕಾರಿ ಯತೀಶ್ ಎನ್
author img

By

Published : May 23, 2021, 1:30 PM IST

Updated : May 23, 2021, 2:05 PM IST

ಗದಗ: ಜಿಲ್ಲೆಯಲ್ಲೂ ರೆಮ್ಡಿಸಿವಿರ್​ಅನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಜಿಲ್ಲಾ ಸೈಬರ್ ವಿಭಾಗದ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್​​ ವರಿಷ್ಠಾಧಿಕಾರಿ ಯತೀಶ್ ಎನ್. ತಿಳಿಸಿದ್ದಾರೆ.

ಸದ್ಯ ನಾಲ್ವರ ಬಂಧನವಾಗಿದ್ದು, ಇನ್ನೋರ್ವ ಮಹಿಳಾ ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಈ ಪ್ರಕರಣದಲ್ಲಿ ಆಸ್ಪತ್ರೆಯ ನರ್ಸ್, ಜಿಮ್ಸ್​ನ ಲ್ಯಾಬ್ ಟೆಕ್ನಿಷಿಯನ್, ಖಾಸಗಿ ಆಸ್ಪತ್ರೆಯ ಸಿಬ್ಬಂದಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಈ ಆರೋಪಿಗಳು ರೂ. 3 ಸಾವಿರದ ಔಷಧವನ್ನು ರೂ. 30 ಸಾವಿರಕ್ಕೆ ಮಾರಾಟ ಮಾಡುತ್ತಿದ್ದರು ಎಂದು ಎಸ್​ಪಿ ತಿಳಿಸಿದ್ದಾರೆ.‌

ಜಿಲ್ಲಾ ಪೊಲೀಸ್​​ ವರಿಷ್ಠಾಧಿಕಾರಿ ಯತೀಶ್ ಎನ್

ಮಹ್ಮದ್ ಇಸ್ಮಾಯಿಲ್ ಓದೇಕಾರ, ಪಿರೋಜ್ ಖಾನ್ ಪಠಾಣ, ಜಿಮ್ಸ್​​ನ ಲ್ಯಾಬ್ ಟೆಕ್ನಿಷಿಯನ್ ಗವಿಸಿದ್ದಯ್ಯ ಹಿರೇಮಠ, ರಮೇಶ ಚವಟಗಿ, ನರ್ಸ್ ಜ್ಯೋತಿ ಲಮಾಣಿ ಆರೋಪಿತರು. ಸದ್ಯ ನಾಲ್ವರ ಬಂಧನವಾಗಿದ್ದು, ಜ್ಯೋತಿ ಲಮಾಣಿ ಅವರ ಬಂಧನವಾಗಬೇಕಿದೆ.

ಜೀವ ರಕ್ಷಕ ಇಂಜೆಕ್ಷನ್ ಔಷಧಿಯನ್ನು ಇವರು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವ ಕುರಿತು ಗುಪ್ತ ಮಾಹಿತಿ ಸಂಗ್ರಹಿಸಲಾಗಿತ್ತು. ಸೈಬರ್ ಪೊಲೀಸ್ ಇನ್ಸ್​​​ಪೆಕ್ಟರ್ ಮಹಾಂತೇಶ ಟಿ. ಅವರ ನೇತೃತ್ವದ ತಂಡ, ಗದಗ – ಮುಳಗುಂದ ರಸ್ತೆಯ ರಾಧಾಕೃಷ್ಣ ನಗರದ ಹತ್ತಿರ, 30 ಸಾವಿರಕ್ಕೆ ರೆಮ್ಡಿಸಿವಿರ್ ಮಾರಾಟ ಮಾಡುತ್ತಿದ್ದ ಸಂದರ್ಭದಲ್ಲಿ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಲಾಗಿದೆ.

ಬಂಧಿತರನ್ನು ವಿಚಾರಣೆಗೆ ಒಳಪಡಿಸಿದಾಗ ಇನ್ನೂ ಮೂವರು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಒಪ್ಪಿಕೊಂಡಿದ್ದಾರೆ. ಸದ್ಯ ಅವರಿಗಾಗಿ ಹುಡುಕಾಟ ನಡೆದಿದೆ. ಬಂಧಿತ ಆರೋಪಿಗಳ ಮೇಲೆ ಐಪಿಸಿ ಸೆಕ್ಷನ್ 409, 420 ಸಹ ಕಲಂ- 34, ಐಪಿಸಿ ಮತ್ತು ಕಲಂ 4, 5, 6 ಮತ್ತು 13, ಡ್ರಗ್ಸ್ ಕಂಟ್ರೋಲ್ ಕಾಯ್ದೆ-1950ರ ಅಡಿ ಪ್ರಕರಣ ದಾಖಲಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇದನ್ನೂ ಓದಿ: ಧಾರವಾಡ: ಒಂದೇ ಕಾಲೋನಿಯ 62 ಮಂದಿಗೆ ವಕ್ಕರಿಸಿದ ಕೋವಿಡ್

ಬಂಧಿತರಿಂದ ವಶಪಡಿಸಿಕೊಂಡಿರುವ 14 ರೆಮ್ಡಿಸಿವಿರ್​​ನ ಮೌಲ್ಯ ರೂ. 48,860 ಇದೆ. ಆದರೆ, ಆರೋಪಿತರು ರೂ. 30 ಸಾವಿರದಂತೆ ರೂ. 4,20,000 ಲೆಕ್ಕಾಚಾರದಲ್ಲಿ ಮಾರಾಟ ಮಾಡಲು ಸಂಚು ರೂಪಿಸಿದ್ದರು. ಸದ್ಯ ಬಂಧಿತರಿಂದ ರೂ. 2,500 ನಗದು ಹಾಗೂ 4 ಮೊಬೈಲ್​ಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೇ, ಈ ಪ್ರಕರಣದ ತನಿಖೆಯನ್ನು ಗದಗ ಗ್ರಾಮೀಣ ಸಿಪಿಐ ರವಿ ಕಪ್ಪತ್ತನವರ ಮುಂದುವರೆಸಲಿದ್ದಾರೆ ಎಂದು ಎಸ್ಪಿ ಯತೀಶ್ ಎನ್. ಮಾಹಿತಿ ನೀಡಿದರು.

Last Updated : May 23, 2021, 2:05 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.