ETV Bharat / state

ಗದಗದಲ್ಲಿ 61 ಮಂದಿಗೆ ಕೊರೊನಾ ಸೋಂಕು, ಮೂವರು ಬಲಿ

author img

By

Published : Jul 29, 2020, 8:27 PM IST

ಜಿಲ್ಲೆಯಲ್ಲಿ 61 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 1201ಕ್ಕೆ ಏರಿಕೆಯಾಗಿದೆ.

Gadag corona case
Gadag corona case

ಗದಗ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇಂದು 61 ಜನರಿಗೆ ಸೋಂಕು ತಗುಲಿದೆ. ಈ ಮೂಲಕ ಸೋಂಕಿತರ ಸಂಖ್ಯೆ 1,201ಕ್ಕೆ ಏರಿಕೆಯಾಗಿದೆ. ಈ ಪೈಕಿ ಮೂವರು ಮೃತಪಟ್ಟಿದ್ದಾರೆ.

ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್‌ನಲ್ಲಿ ಜಿಲ್ಲೆಯಲ್ಲಿ 61 ಜನರಿಗೆ ಸೋಂಕು ದೃಢಪಟ್ಟಿದೆ. ಹಾಗೂ 10 ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು 448 ಜನರು ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.

ಇಲ್ಲಿಯವರೆಗೆ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 28ಕ್ಕೆ ಏರಿಕೆಯಾಗಿದೆ. ಸದ್ಯ 725 ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.