ಗದಗ : ಜಿಲ್ಲೆಯಲ್ಲಿ ಇಂದು ಮತ್ತೆ 61 ಕೊರೊನಾ ಕೇಸ್ ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 1,004ಕ್ಕೆ ಏರಿಕೆಯಾಗಿದೆ.
ಇಂದು ಇಬ್ಬರು ಮೃತಪಟ್ಟಿರುವುದಾಗಿ ವರದಿಯಾಗಿದೆ. ಈ ಮೂಲಕ ಮೃತರ ಸಂಖ್ಯೆ 22 ಕ್ಕೆ ಏರಿಕೆಯಾಗಿದೆ.
ಇಂದು 26 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈವರೆಗೆ 354 ಜನ ಕೊರೊನಾದಿಂದ ಗುಣಮುಖರಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 628 ಸಕ್ರಿಯ ಪ್ರಕರಣಗಳಿಗೆ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಗದಗ ಜಿಲ್ಲಾಧಿಕಾರಿ ಸುಂದರೇಶ ಬಾಬು ತಿಳಿಸಿದ್ದಾರೆ.