ಗದಗ: ಜಿಲ್ಲೆಯಲ್ಲಿ ಇಂದು 78 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 1842ಕ್ಕೆ ಏರಿಕೆಯಾಗಿದೆ. ಓರ್ವ ವ್ಯಕ್ತಿ ಸೋಂಕಿನಿಂದ ಮೃತಪಟ್ಟಿರೋದಾಗಿ ವರದಿಯಾಗಿದೆ.
ಈ ಮೂಲಕ ಮೃತಪಟ್ಟವರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ಇಂದು ಒಂದೇ ದಿನ 108 ಜನ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಜೊತೆಗೆ ಈವರೆಗೆ 741 ಜನ ಕೊರೊನಾದಿಂದ ಗುಣಮುಖರಾಗಿದ್ದಾರೆ.
ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1060ಕ್ಕೆ ಏರಿಕೆಯಾಗಿದ್ದು, ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಗದಗ ಜಿಲ್ಲಾಧಿಕಾರಿ ಸುಂದರೇಶ ಬಾಬು ತಿಳಿಸಿದ್ದಾರೆ.