ಗದಗ: ಜಿಲ್ಲೆಯಲ್ಲಿ ಶನಿವಾರ 9ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ.
ನಗರದ ಕನ್ನಡ ಭವನದಲ್ಲಿ ಕನ್ನಡ ಹಬ್ಬವನ್ನ ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು. ಸಮ್ಮೇಳನದ ಸರ್ವಾಧ್ಯಕ್ಷರಾಗಿ ಪ್ರೊ.ರವೀಂದ್ರ ಕೊಪ್ಪರ ಅವರು ಆಯ್ಕೆಯಾಗಿದ್ದರು. ಕಾರ್ಯಕ್ರಮಕ್ಕೂ ಮುನ್ನ ನಗರದ ಕಿತ್ತೂರು ಚೆನ್ನಮ್ಮ ಸರ್ಕಲ್ನಿಂದ ಕನ್ನಡದ ಭವನದವರೆಗೆ ಭುವನೇಶ್ವರಿ ತಾಯಿ ಭಾವಚಿತ್ರ ಮತ್ತು ಸರ್ವಾಧ್ಯಕ್ಷರನ್ನ ಮೆರವಣಿಗೆಯ ಮೂಲಕ, ಡೊಳ್ಳು ಕುಣಿತದ ಮೂಲಕ ಬರಮಾಡಿಕೊಳ್ಳಲಾಯಿತು.
ಇಂದು ಸಮ್ಮೇಳನಕ್ಕೆ ತೆರೆ ಬೀಳಲಿದ್ದು, ಕವಿಗೋಷ್ಠಿ, ವಿಚಾರಗೋಷ್ಠಿ, ಚಿಂತನ ಮಂತನ, ನಾಡು -ನುಡಿಯ ಇತಿಹಾಸದ ಬಗ್ಗೆ ಸಾಹಿತ್ಯದ ಪರಾಮರ್ಶೆ ಕುರಿತು ಹಲವಾರು ಕಾರ್ಯಕ್ರಮಗಳು ಜರುಗಲಿವೆ.
ಸಮ್ಮೇಳನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ್, ಶಾಸಕ ಹೆಚ್.ಕೆ.ಪಾಟೀಲ್, ಹಲವು ಸಾಹಿತಿಗಳು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭಾಗಿಯಾಗಿದ್ದರು.