ETV Bharat / state

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದ್ರೆ ಮಹಿಳೆಯರಿಗೆ ಉಚಿತ ಬಸ್​ ಪಾಸ್: ಸಚಿವ ಶ್ರೀರಾಮುಲು

author img

By

Published : Mar 13, 2022, 5:46 PM IST

Updated : Mar 13, 2022, 7:01 PM IST

ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಆಡಳಿತಕ್ಕೆ ಬಂದರೆ ರಾಜ್ಯದ ಎಲ್ಲ ಮಹಿಳೆಯರಿಗೆ ಉಚಿತ ಬಸ್ ​ಪಾಸ್​ ಕೊಡುವ ವ್ಯವಸ್ಥೆಯನ್ನು ಬಿಜೆಪಿ ಮಾಡುತ್ತದೆ ಎಂದು ಗದಗದಲ್ಲಿ ಸಾರಿಗೆ ಇಲಾಖೆ ಸಚಿವ ಶ್ರೀರಾಮುಲು ಹೇಳಿಕೆ ನೀಡಿದ್ದಾರೆ. ಕೆಎಸ್​ಆರ್​ಟಿಸಿಯಲ್ಲಿ ಯಾವುದೇ ಆಸ್ತಿ ಅಡಮಾನವಾಗಿ ಇಟ್ಟಿಲ್ಲ. ಬೆಂಗಳೂರು ಶಾಂತಿನಗರ ಕಾಂಪ್ಲೆಕ್ಸ್ ಅಡಮಾನ‌ ಇಡಲಾಗಿದೆ. ಅಡಮಾನ ಇಟ್ಟ ಹಣವನ್ನು ಸಿಬ್ಬಂದಿ ಭವಿಷ್ಯ ನಿಧಿಗೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.

transport minister ShreeRamulu
ಸಾರಿಗೆ ಸಚಿವ ಶ್ರೀ ರಾಮುಲು ಸುದ್ದಿಗಾರರೊಂದಿಗೆ ಮಾತನಾಡಿದರು.

ಗದಗ: ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದ ಎಲ್ಲ ಮಹಿಳೆಯರಿಗೂ ಉಚಿತ ಬಸ್ ಪಾಸ್ ನೀಡುತ್ತೇವೆ ಎಂದು ಸಾರಿಗೆ ಇಲಾಖೆ ಸಚಿವ ಬಿ.ಶ್ರೀರಾಮುಲು ಹೇಳಿಕೆ ನೀಡಿದ್ದಾರೆ.

ಸಾರಿಗೆ ಸಚಿವ ಶ್ರೀರಾಮುಲು ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪಾಸ್ ಕೊಡುವ ವ್ಯವಸ್ಥೆಯನ್ನು ಬಿಜೆಪಿ ಮಾಡುತ್ತದೆ ಎಂದು ಸಚಿವರು ಹೇಳಿದ್ದು, ಮುಂದಿನ ಚುನಾವಣೆಗೆ ಹೊಸ ತಂತ್ರ ರೂಪಿಸಿರುವಂತೆ ಕಾಣುತ್ತಿದೆ. ಕೆಎಸ್​ಆರ್​ಟಿಸಿಯಲ್ಲಿ ಯಾವುದೇ ಆಸ್ತಿ ಅಡಮಾನವಾಗಿ ಇಟ್ಟಿಲ್ಲ. ಬೆಂಗಳೂರು ಶಾಂತಿನಗರ ಕಾಂಪ್ಲೆಕ್ಸ್ ಅಡಮಾನ‌ ಇಡಲಾಗಿದೆ ಎಂದು ಸ್ಪಷ್ಟಪಡಿಸಿರುವ ಸಚಿವರು, ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಹುಬ್ಬಳ್ಳಿ ಕಡೆ 16 ಎಕರೆ ಅಡಮಾನ ಇಡಲಾಗಿದೆ. ಕಲ್ಯಾಣ ಕರ್ನಾಟಕದಲ್ಲೂ ಕೆಲವು ಜಮೀನು ಅಡಮಾನ ಇಡಲಾಗಿದೆ. ಸಂಸ್ಥೆ ಜಾಗ ಅಡಮಾನ ಇಟ್ಟ ಹಣವನ್ನು ಸಿಬ್ಬಂದಿ ಭವಿಷ್ಯ ನಿಧಿಗೆ ನೀಡಲಾಗಿದೆ. ಕಡಿಮೆ ದರದಲ್ಲಿ ಬಡ್ಡಿ ಇದ್ದ ಕಾರಣ ಆಸ್ತಿ ಅಡಮಾನ ಇಡಲಾಗಿದೆ. ಇನ್ನೂ ಒಂದೂವರೆ ತಿಂಗಳ ಸಂಬಳ ಮಾತ್ರ ಬಾಕಿ ಇದೆ. ಒಂದು ವಾರದೊಳಗೆ ಆ ಬಾಕಿ ಸಂಬಳ ನೀಡಿದರೆ ಕ್ಲಿಯರ್ ಆಗುತ್ತೆ ಎಂದು ಸಚಿವರು ತಿಳಿಸಿದರು.

ಮುಂದಿನ ತಿಂಗಳಿಂದ ಸಿಬ್ಬಂದಿಗೆ ನಿರಂತರವಾಗಿ ಸಂಬಳ ನೀಡಲಾಗುತ್ತದೆ. ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ 3 ಸಾವಿರ ಕೋಟಿ ರೂ.ಯನ್ನು ಇಲಾಖೆಗೆ ನೀಡಿದ್ದಾರೆ. 3 ಸಾವಿರ ಕೋಟಿಯನ್ನು ಸಂಬಳ ನೀಡಲು ಕೊಟ್ಟಿದ್ದಾರೆ. ಇನ್ಮುಂದೆ ಚಾಲಕರು, ನಿರ್ವಾಹಕರು ಹಾಗೂ ಸಿಬ್ಬಂದಿ ಸಂಬಳಕ್ಕೆ ಕಾಯಬೇಕಿಲ್ಲ. ಅಡಮಾನ ಇಟ್ಟಿದ್ದು ವೈಯಕ್ತಿಕ ಬಳಕೆಗೆ ಅಲ್ಲ. ಸಿಬ್ಬಂದಿ ಭವಿಷ್ಯದ ನಿಧಿಗಾಗಿ ಎಂದು ಸಚಿವರು ಸ್ಪಷ್ಟಪಡಿಸಿದರು.

ಕಾಂಗ್ರೆಸ್ ಪಾರ್ಟ್‌ ಟೈಂ ಪಕ್ಷವಾಗಿ ಮುಂದಿನ ದಿನಗಳಲ್ಲಿ ಉಳಿಯುತ್ತದೆ. ರಾಹುಲ್ ಗಾಂಧಿ ಪಾರ್ಟ್‌ಟೈಂ ನಾಯಕರಾಗುತ್ತಾರೆ. ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕಾಂಗ್ರೆಸ್ ಅನ್ನು ವಾಶ್​ಔಟ್​ ಮಾಡುತ್ತಿದೆ ಎಂದು ಶ್ರೀರಾಮುಲು ಹೇಳಿದರು.

ಇದೇ ವೇಳೆ ಕೆಲೂರ ಗ್ರಾಮದ ರೈತ ಮಹಿಳೆ ಆತ್ಮಹತ್ಯೆ ಪ್ರಕರಣ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಅವರು, ಅರಣ್ಶ ಜಮೀನಿನಲ್ಲಿ ಒಕ್ಕಲುತನ ಮಾಡುವವರನ್ನು ಒಕ್ಕಲೆಬ್ಬಿಸಬಾರದು. ಸುಮಾರು 20-30 ವರ್ಷಗಳಿಂದ ಒಕ್ಕಲುತನ ಮಾಡುತ್ತಿದ್ದರೆ, ಅಂತಹವರಿಗೆ ಸಾಗುವಳಿ ಚೀಟಿ ನೀಡಬೇಕೆಂದು ಸುರ್ಪಿಂಕೋರ್ಟ್​ ಸ್ಪಷ್ಟ ಸಂದೇಶ ನೀಡಿದೆ. ಮುಂದೆ ಈ ರೀತಿ ಘಟನೆಗಳು ಮರುಕಳಿಸಬಾರದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದೇನೆ. ನಿರ್ಮಲಾ ಕುಟುಂಬಕ್ಕೆ ಸರ್ಕಾರ ಈಗಾಗಲೇ ಪರಿಹಾರ ಧನ ನೀಡಿದೆ. ಪರಿಶಿಷ್ಟ ಪಂಗಡಗಳ ಇಲಾಖೆಯಿಂದ ರೈತ ಮಹಿಳೆಯ ಕುಟುಂಬಕ್ಕೆ ಎರಡು ಎಕರೆ ಜಮೀನು ಹಾಗೂ ಗಂಗಾ ಕಲ್ಯಾಣ ಯೋಜನೆಯಲ್ಲಿ ಒಂದು ಬೊರ್​ವೆಲ್ ಕೊಡಿಸುತ್ತೇವೆ. ಸರ್ಕಾರದಿಂದ ಏನು ಪರಿಹಾರ ಬೇಕು ಅದನ್ನು ಕೊಡಿಸುವ ಪ್ರಯತ್ನ ಮಾಡುತ್ತೇನೆ ಎಂದಿದ್ದಾರೆ.

Last Updated : Mar 13, 2022, 7:01 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.