ETV Bharat / state

ಗದಗದಲ್ಲಿ 14ರ ಹರೆಯದ ವಿದ್ಯಾರ್ಥಿನಿ ಕೊಲೆ: ಮುದ್ದಿನ ಮಗಳ ಕಳ್ಕೊಂಡು ಹೆತ್ತವರ ಆಕ್ರಂದನ - gadag

ಗದಗ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೈಸ್ಕೂಲ್ ವಿದ್ಯಾರ್ಥಿನಿಯೋರ್ವಳನ್ನು ಕಿಡಿಗೇಡಿಗಳು ಕೊಲೆ ಮಾಡಿ ಮುಳ್ಳಿನ ಕಂಟಿಯಲ್ಲಿ ಬಿಸಾಕಿ ನಂತರ ಗೋಣಿ ಚೀಲ ಹೊದಿಸಿ ಪರಾರಿಯಾಗಿರುವ ಘಟನೆ ನಡೆದಿದೆ.

student murder
student murder
author img

By

Published : Oct 28, 2021, 10:23 AM IST

Updated : Oct 28, 2021, 12:39 PM IST

ಗದಗ: 14 ವರ್ಷದ ವಿದ್ಯಾರ್ಥಿನಿಯೋರ್ವಳನ್ನು ಕೊಲೆಗೈದು ಮುಳ್ಳಿನ ಕಂಟಿಯಲ್ಲಿ ಬಿಸಾಕಿ ಹೋಗಿರುವ ಘಟನೆ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇದೇ ಅಕ್ಟೋಬರ್ 23 ರಂದು ಗದಗ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದ್ಯಾರ್ಥಿನಿಯೋರ್ವಳು ಕಾಣೆಯಾಗಿದ್ದಳು. ಮಗಳು ಕಾಣದ ಹಿನ್ನೆಲೆಯಲ್ಲಿ ಪೋಷಕರು ಎಲ್ಲಾ ಕಡೆ ಹುಡುಕಾಟ ನಡೆಸಿದ್ದರು. ಆದರೆ ಯಾವುದೇ ಸುಳಿವು ಸಿಗದ ಹಿನ್ನೆಲೆಯಲ್ಲಿ ಪೊಲೀಸರಿಗೆ ನಾಪತ್ತೆ ಕುರಿತು ಮಾಹಿತಿ ನೀಡಿದ್ದರು. ಆದರೆ ಠಾಣೆಯಲ್ಲಿ ಯಾವುದೇ ದೂರು ದಾಖಲಾಗದ ಕಾರಣ ಪೊಲೀಸರು ಹುಡುಕಾಟ ನಡೆಸುವ ಗೋಜಿಗೆ ಹೋಗಿರಲಿಲ್ಲ ಎನ್ನಲಾಗಿದೆ.

ಮುಳ್ಳಿನ ಕಂಟಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ

ಇಂದು ಮನೆಯ ಪಕ್ಕದಲ್ಲೇ ಮಗಳ ಶವ ಪತ್ತೆಯಾಗಿದ್ದು, ಯಾರೋ ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಆಕೆಯನ್ನು ಕೊಲೆ ಮಾಡಿ, ಗೋಣಿಚೀಲ ಹೊದಿಸಿ ಹೋಗಿದ್ದಾರೆ. ಘಟನೆ ನಡೆದು ಮೂರು, ನಾಲ್ಕು ದಿನಗಳಾಗಿದ್ದರಿಂದ ಶವ ಕೊಳೆತು ನಾರುತ್ತಿತ್ತು. ಕೆಟ್ಟ ವಾಸನೆ ಬರುತ್ತಿರುವುದನ್ನು ಗಮನಿಸಿದಾಗ ಮನೆಯವರಿಗೆ ಬಾಲಕಿಯ ಶವ ಪತ್ತೆಯಾಗಿದೆ. ಮುದ್ದಿನ ಮಗಳನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ.

ಇನ್ನು ಘಟನೆಗೆ ಸಂಬಂಧಿಸಿದಂತೆ ಮೂವರು ಸಿಪಿಐಗಳ ನೇತೃತ್ವದಲ್ಲಿ ಪ್ರತ್ಯೇಕ ತಂಡ ರಚನೆ ಮಾಡಲಾಗಿದ್ದು, ಹಲವಾರು ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ. ಸ್ಥಳಕ್ಕೆ ಡಿವೈಎಸ್​ಪಿ ಶಿವಾನಂದ ಸೇರಿದಂತೆ ಗ್ರಾಮೀಣ ಠಾಣೆ ಪೊಲೀಸರು, ಬೆಳರಚ್ಚುಗಾರರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Last Updated : Oct 28, 2021, 12:39 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.