ಗದಗ: ಇಂದು ಹೊಸದಾಗಿ 79 ಜನ ಸೇರಿಸಿ ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 1430 ಮಂದಿ ಮೇಲೆ ನಿಗಾ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.
ಹಾಗೆಯೇ 28 ದಿನಗಳ ನಿಗಾ ಅವಧಿ ಪೂರೈಸಿದವರು 234, ಮನೆಯಲ್ಲಿಯೇ ಪ್ರತ್ಯೇಕ ನಿಗಾದಲ್ಲಿರುವವರು 1165 ಜನ, ಸೌಲಭ್ಯದೊಂದಿಗೆ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ನಿಗಾದಲ್ಲಿರುವವರು 21 ಜನರಿದ್ದಾರೆ ಎಂದು ತಿಳಿಸಿದ್ದಾರೆ.
ಇನ್ನು ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಿದ ಒಟ್ಟು ಮಾದರಿ 1487. ಇದರಲ್ಲಿ ಇಂದು ಹೊಸದಾಗಿ 79 ಮಾದರಿಗಳು ಸೇರಿವೆ. ಇನ್ನು ಒಟ್ಟು 1181 ನೆಗೆಟಿವ್ ಆಗಿವೆ. ಇನ್ನು 60 ಮಾದರಿಗಳು ತಿರಸ್ಕೃತಗೊಂಡಿದ್ದು, 241 ವರದಿಗಳು ಬಾಕಿ ಇವೆ ಎಂದಿದ್ದಾರೆ.
ಜಿಲ್ಲೆಯಲ್ಲಿ ಪಿ-166, ಪಿ-304, ಪಿ-370, ಪಿ-396, ಪಿ-514 ಸೇರಿ ಒಟ್ಟು 5 ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ. ಈ ಪೈಕಿ ಪಿ-166 ಮೃತಪಟ್ಟಿದ್ದು, ಪಿ-304 ವ್ಯಕ್ತಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಹಾಗೆಯೇ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.