ಗದಗ: ನಗರದಲ್ಲಿ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಎಸ್.ಎನ್.ರುದ್ರೇಶ್ ಅವರ ಮನೆ ಹಾಗೂ ಕಚೇರಿ ಮೇಲೆ ಎಸಿಬಿ ಪೊಲೀಸರು ದಾಳಿ ಮಾಡಿದ್ದಾರೆ.
ಏಕಕಾಲಕ್ಕೆ 3 ಕಡೆ ದಾಳಿ ಮಾಡಿದ್ದಾರೆ. ನಗರದ ನೌಕರರ ಭವನ ಬಳಿಯ ಕ್ವಾಟ್ರಸ್, ಜಿಲ್ಲಾಡಳಿತ ಭವನದ ಕಚೇರಿ ಹಾಗೂ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲುಕಿನ ಚಿಕ್ಕಜಾಜೂರು ನಿವಾಸದ ಮೇಲೆ ದಾಳಿ ನಡೆಸಿದ್ದಾರೆ.
ಅಧಿಕಾರಿ ಎಸ್.ಎನ್.ರುದ್ರೇಶ್ ಆದಾಯಕಿಂತ ಹೆಚ್ಚಿನ ಆಸ್ತಿ ಗಳಿಸಿರುವ ಆರೋಪದ ಹಿನ್ನೆಲೆಯಲ್ಲಿ ದಾಳಿ ಮಾಡಲಾಗಿದೆ. ಅಧಿಕಾರಿ ಮನೆಯಲ್ಲಿ 250 ಗ್ರಾಂ ಚಿನ್ನಾಭರಣ, 1.50 ಲಕ್ಷ ನಗದು ಪತ್ತೆಯಾಗಿದೆ ಎನ್ನಲಾಗಿದೆ. ಅಧಿಕಾರಿಗಳು ಕಡತಗಳ ಪರಿಶೀಲನೆ ನಡೆಸಿದ್ದಾರೆ. ಬೆಳಗಾವಿ ಎಸಿಬಿ ಡಿವೈಎಸ್ಪಿ ಮಹಾಂತೇಶ, ಗದಗ ಸಿಪಿಐ ವೈ.ಎಸ್.ಧರಣಾಯಿಕ್, ಸಿಪಿಐ ಸುನೀಲ್ ಹಾಗೂ ಸಿಬ್ಬಂದಿ ನೇತೃತ್ವದಲ್ಲಿ ಮನೆ ಹಾಗೂ ಕಚೇರಿ ಮೇಲೆ ದಾಳಿ ಮಾಡಲಾಗಿದೆ.
ಗದಗ ಡಿವೈಎಸ್ಪಿ ವಾಸುದೇವರಾಮ್ ನೇತೃತ್ವದಲ್ಲಿ ಚಿಕ್ಕಜಾಜೂರಿನ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ದಾಳಿ ಮಾಡಲಾಗಿದೆ. ಒಟ್ಟು ಮೂರು ತಂಡಗಳು 3 ಕಡೆ ದಾಳಿ ಮಾಡಿವೆ.