ETV Bharat / state

ಗದಗದಲ್ಲಿ ಎಸಿಬಿ ದಾಳಿ: ಲಂಚ ಪಡೆಯುತ್ತಿದ್ದ ಇಬ್ಬರು ಅಧಿಕಾರಿಗಳು ಬಲೆಗೆ - arrested corrupt officials

ಗದಗದಲ್ಲಿ ಸಬ್ಸಿಡಿ ಮಂಜೂರು ಮಾಡಲು ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳು ದಿಢೀರ್ ದಾಳಿ ಮಾಡಿ ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದಾರೆ.

Gadag
ಎಸಿಬಿ ಬಲೆಗೆ ಬಿದ್ದ ಭ್ರಷ್ಟ ಅಧಿಕಾರಿಗಳು
author img

By

Published : May 27, 2020, 11:51 AM IST

ಗದಗ: ನಗರದಲ್ಲಿ ಎಸಿಬಿ ಅಧಿಕಾರಿಗಳು ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.

ನಗರದ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಜಾಕೀರ್ ಹುಸೇನ್ ಕುಕನೂರ ಮತ್ತು ಕಂಪ್ಯೂಟರ್ ಆಪರೇಟರ್ ಅಕ್ಬರ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿಗಳಾಗಿದ್ದಾರೆ. ಫಾರೂಕ್ ಅಹ್ಮದ್ ಬದರಕುಂದಿ ಎಂಬುವರಿಗೆ ನಿಗಮದ ವತಿಯಿಂದ 3 ಲಕ್ಷ ರೂ. ಸಬ್ಸಿಡಿ ಮಂಜೂರಾಗಿತ್ತು. ಸಬ್ಸಿಡಿ ಮಂಜೂರು ಮಾಡಲು ಫಾರೂಕ್ ಅವರಿಂದ 40 ಸಾವಿರ ರೂ.ಗೆ ಬೇಡಿಕೆ ಇಟ್ಟಿದ್ದರಂತೆ.

Gadag
ಪತ್ರಿಕಾ ಪ್ರಕಟಣೆ

ಲಂಚ ಸ್ವೀಕಾರ ಮಾಡುವ ವೇಳೆ ಎಸಿಬಿ ಅಧಿಕಾರಿಗಳು ದಿಢೀರ್ ದಾಳಿ ಮಾಡಿ ಇಬ್ಬರನ್ನು ವಶಕ್ಕೆ ಪಡೆದು ದಾಖಲೆಗಳನ್ನು ಜಪ್ತಿ ಮಾಡಲಾಗಿದೆ. ನಗರದ ಎಸಿಬಿ ಡಿಎಸ್​ಪಿ ವಾಸುದೇವ ರಾಮ್ ಎನ್. ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಗದಗ ಎಸಿಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.