ಗದಗ: ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿರುವ ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಬೆಳಗಾವಿ ಉತ್ತರ ವಲಯ ಎಸಿಬಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದರು.
ಮುಂಡರಗಿ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಭೂ ದಾಖಲೆ ಸೇರಿದಂತೆ ವಿವಿಧ ದಾಖಲಾತಿಗಳ ನೋಂದಣಿಗೆ ಸಾರ್ವಜನಿಕರಿಂದ ಹೆಚ್ಚುವರಿ ಹಣ ಪಡೆಯುತ್ತಿದ್ದಾರೆ ಎಂದು ಸಾರ್ವಜನಿಕರು ಎಸಿಬಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಕಚೇರಿ ಮೇಲೆ ದಾಳಿ ಮಾಡಿ, ಅಧಿಕಾರಿಗಳು, ಸಿಬ್ಬಂದಿ ಹಾಗೂ ಬಾಂಡ್ ರೈಟರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಬೆಳಗಾವಿ ಎಸ್ಪಿ ನ್ಯಾಮಗೌಡರ ನೇತೃತ್ವದ ತಂಡ ದಾಳಿ ನಡೆಸಿ ಅನೇಕ ಕಡತಗಳನ್ನು ಪರಿಶೀಲನೆ ನಡೆಸಿದೆ. ಈ ಕುರಿತು ಗದಗ ಎಸಿಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಜೋಶಿ ಮಗಳ ಮದುವೆಯಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಆರೋಪ: ಜಿಲ್ಲಾಡಳಿತದ ವಿರುದ್ಧ ಜನರ ಆಕ್ರೋಶ