ಗದಗ: ಬೈಕ್ ಸ್ಕಿಡ್ ಆಗಿ ಬಿದ್ದ ಬೈಕ್ ಸವಾರನ ಮೇಲೆ ಬಸ್ ಹರಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗದಗನಲ್ಲಿ ನಡೆದಿದೆ.
ಗದಗ ನಗರದ ಮುಳಗುಂದ ನಾಕಾ ಬಳಿ ಈ ಘಟನೆ ನಡೆದಿದ್ದು, ಬಸ್ ಓವರ್ಟೆಕ್ ಮಾಡುವ ಸಂದರ್ಭದಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದಿದ್ದಾನೆ. ಕೆಳಗೆ ಬಿದ್ದ ಯುವಕನ ತಲೆ ಮೇಲೆ ಕೆಎಸ್ಆರ್ಟಿಸಿ ಬಸ್ ಹಾಯ್ದು ಸ್ಥಳದಲ್ಲಿಯೇ ಬೈಕ್ ಸವಾರ ಮೃತಪಟ್ಟಿದ್ದಾನೆ.
ಮೃತ ಯವಕ ಉಡಚಪ್ಪ ಪೂಜಾರ ಅಂತ ಹೇಳಲಾಗಿದೆ. ಈತ ಗದಗ ತಾಲೂಕಿನ ನಾಗಾವಿ ನಿವಾಸಿಯಾಗಿದ್ದು, ಗದಗನಲ್ಲಿ ಖಾಸಗಿ ಹೋಟೆಲ್ ನಲ್ಲಿ ಕೆಲಸ ಮಾಡ್ತಿದ್ದ. ಟಿಫಿನ್ ಮಾಡಲು ಹೊರಗಡೆ ಬಂದ ವೇಳೆ ಘಟನೆ ಸಂಭವಿಸಿದೆ. ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಗದಗ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.