ETV Bharat / state

ನೆರೆ ಸಂತ್ರಸ್ತರಿಗೆ ಶಾಶ್ವತ ಪರಿಹಾರಕ್ಕೆ ಕ್ರಮ: ಡಿಸಿ ಸುಂದರೇಶ್ ಬಾಬು - ಗದಗ ತಾಲ್ಲೂಕು ಮಟ್ಟದ ಅಧಿಕಾರಿಗಳ ವಿಡಿಯೋ ಕಾನ್ಪರೆನ್ಸ್ ಸಭೆ

ನದಿ ಪಾತ್ರದ ಜನರಿಗೆ ಶಾಶ್ವತ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಗದಗ ಜಿಲ್ಲಾಧಿಕಾರಿ ಸುಂದರೇಶಬಾಬು ಹೇಳಿದ್ದಾರೆ.

District Collector M. Sundaresh Babu
ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು
author img

By

Published : Aug 19, 2020, 12:19 AM IST

ಗದಗ: ಜಿಲ್ಲೆಯಲ್ಲಿ ಪ್ರತಿವರ್ಷ ಪ್ರವಾಹ ಉಂಟಾಗುತ್ತಿದ್ದು, ಇದರಿಂದ ಮಲಪ್ರಭಾ, ಬೆಣ್ಣೆಹಳ್ಳ ಹಾಗೂ ತುಂಗಭದ್ರಾ ನದಿ ಪಾತ್ರದ ಜಿಲ್ಲೆಯ ಜನರು ಸಂಕಷ್ಟಕ್ಕೆ ಸಿಲುಕಿಕೊಳ್ಳುತ್ತಿದ್ದಾರೆ. ಹೀಗಾಗಿ ಸಂತ್ರಸ್ತರಿಗೆ ತಾತ್ಕಾಲಿಕ ಪರಿಹಾರ ಕಲ್ಪಿಸುವ ಬದಲಾಗಿ ಶಾಶ್ವತ ಪರಿಹಾರ ಕಲ್ಪಿಸಲು ಕ್ರಮಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಸೂಚಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಕಾನ್ಪರೆನ್ಸ್ ಹಾಲ್‍ನಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ವಿಡಿಯೋ ಕಾನ್ಪರೆನ್ಸ್ ಸಭೆಯಲ್ಲಿ ಅವರು ಮಾತನಾಡಿ, ಮುಂಬರುವ ವರ್ಷಗಳಲ್ಲಿ ಜಿಲ್ಲೆಯಲ್ಲಿ ಅಧಿಕ ಪ್ರಮಾಣದ ಮಳೆ ಸುರಿದರೂ, ಜಲಾಶಯಗಳಿಂದ ನೀರು ಬಿಟ್ಟರೂ ಕಾಳಜಿ ಕೇಂದ್ರ ಹಾಗೂ ತಾತ್ಕಾಲಿಕ ಶೆಡ್ ನಿರ್ಮಿಸುವ ಸಂದರ್ಭ ಎದುರಾಗದಂತೆ ಶಾಶ್ವತ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು ಎಂದರು.

ಮಲಪ್ರಭಾ, ತುಂಗಭದ್ರಾ ಹಾಗೂ ಬೆಣ್ಣೆಹಳ್ಳ ಉಕ್ಕಿ ಹರಿದರೆ ಜಿಲ್ಲೆಯ ನರಗುಂದ, ರೋಣ, ಮುಂಡರಗಿ ಹಾಗೂ ಶಿರಹಟ್ಟಿ ತಾಲೂಕಿನ ಕೆಲ ಗ್ರಾಮಗಳಲ್ಲಿ ಪ್ರತಿವರ್ಷ ಪ್ರವಾಹ ಎದುರಾಗುತ್ತಿದೆ. ನದಿ ಪಾತ್ರದಲ್ಲಿರುವ ಗ್ರಾಮಗಳ ಜನರು ಸಂಕಷ್ಟಕ್ಕೆ ಸಿಲುಕುವ ಮೊದಲು ಸುರಕ್ಷಿತ ಪ್ರದೇಶಗಳಿಗೆ ಶೀಘ್ರವೇ ಸ್ಥಳಾಂತರಿಸಬೇಕು. ನೆರೆ ಹಾವಳಿಗೆ ತುತ್ತಾಗಿರುವ ಜನ ಜಾನುವಾರುಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಂತ್ರಸ್ತರ ಕಾಳಜಿ ಕೇಂದ್ರಗಳಲ್ಲಿ ಯಾವುದೇ ಕುಂದು ಕೊರತೆ ಆಗದಂತೆ ನಿಗಾ ವಹಿಸಬೇಕು. ಪದೇ ಪದೇ ನೆರೆ ಹಾವಳಿಗೆ ತುತ್ತಾಗುತ್ತಿರುವ ಗ್ರಾಮದ ಜನರಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸೂಕ್ತವಾದ ಜಾಗ ಗುರುತಿಸಬೇಕು. ಈಗಾಗಲೇ ಸಂತ್ರಸ್ತರಿಗೆ ನಿರ್ಮಿಸಲಾಗಿದ್ದ ಮನೆಗಳ ಹಕ್ಕು ಪತ್ರಗಳನ್ನು ಕೆಲವರಿಗೆ ವಿತರಿಸಲಾಗಿದ್ದು, ಇನ್ನುಳಿದವರಿಗೂ ಮನೆಗಳ ಹಕ್ಕುಪತ್ರ ನೀಡಬೇಕು. ನಿರ್ಮಾಣ ಹಂತದಲ್ಲಿರುವ ಮನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ಕಾರ್ಯವನ್ನು ಪ್ರಥಮಾಧ್ಯತೆ ಮೇರೆಗೆ ಕೈಗೊಳ್ಳಬೇಕು ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.