ಗದಗ: ಕೋವಿಡ್-19 ನಿಯಂತ್ರಿಸುವ ನಿಟ್ಟಿನಲ್ಲಿ, ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿನ ಕಂಟೈನ್‍ಮೆಂಟ್ ಝೋನ್‍ಗಳ ನಿರ್ವಹಣೆಯಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಲು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿ ಜಿಲ್ಲಾಧಿಕಾರಿ ಸುಂದರೇಶಬಾಬು ಆದೇಶ ಹೊರಡಿಸಿದ್ದಾರೆ.
ಕಂಟೈನ್‍ಮೆಂಟ್ ಝೋನ್‍ಗಳ ವ್ಯಾಪ್ತಿಯಲ್ಲಿರುವ ಜನರ ಕುಂದುಕೊರತೆಗಳ ನಿವಾರಣೆಗಾಗಿ ಹಾಗೂ ಅವರಿಗೆ ಸಿಗಬಹುದಾದ ಎಲ್ಲಾ ಸೌಲಭ್ಯಗಳ ಕುರಿತು ಖಾತ್ರಿ ಪಡಿಸಲು ಮತ್ತು ಕಂಟೈನ್‍ಮೆಂಟ್ ಝೋನ್‍ಗಳ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಷ್ಟಾನಗೊಳಿಸಲು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರುದ್ರೇಶ ಅವರನ್ನು ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಬಿ. ಕಲ್ಲೇಶ ಅವರನ್ನು ನೋಡಲ್ ಅಧಿಕಾರಿಗಳೆಂದು ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಿಸಿದ್ದಾರೆ.