ETV Bharat / state

ಅಕ್ರಮವಾಗಿ ಪಡಿತರ ಅಕ್ಕಿ ಸಾಗಣೆ: ಮೂವರ ಬಂಧನ

ಗದಗ ನಗರದ ಜಿಲ್ಲಾಡಳಿತ ಭವನ ಬಳಿಯ ಗೋದಾಮಿನಿಂದ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ.

Arrest of illegal rice transporters in Gadag
ಗದಗದಲ್ಲಿ ಅಕ್ರಮ ಅಕ್ಕಿ ಸಾಗಿಸುತ್ತಿದ್ದವರ ಬಂಧನ
author img

By

Published : Jan 8, 2021, 7:07 AM IST

ಗದಗ : ಅಕ್ರಮವಾಗಿ ಪಡಿತರ ಅಕ್ಕಿ ಸಾಗಣೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ನಗರದಲ್ಲಿ ಬಂಧಿಸಲಾಗಿದೆ.‌

ಕಾಂಗ್ರೆಸ್ ಮುಖಂಡ ಶ್ರೀಧರ್ ವಜ್ರಬಂಡಿ, ಚಾಲಕ ಸಿದ್ದಲಿಂಗಯ್ಯ ಮರಿಯಮ್ಮನವರ, ಪ್ರಮೋದ್ ಮಾನೇದ ಬಂಧಿತರು. ವಾಹನ ಮಾಲೀಕ ನಾಗರಾಜ್ ಹಾಗೂ ಗೋದಾಮಿನ ಮಾಲೀಕ ನಾಗರಾಜ್ ಮುರಗಿ ಪರಾರಿಯಾಗಿದ್ದಾರೆ.

ಓದಿ : ಸಹೋದರಿಯ ಮದುವೆಗಾಗಿ ಕಳ್ಳನಾದ ಸಹೋದರ!

ಆರೋಪಿಗಳು ನಗರದ ಜಿಲ್ಲಾಡಳಿತ ಭವನದ ಎದುರಿನ ಕನ್ನಡ ಸಾಹಿತ್ಯ ಭವನದ ಸಮೀಪದ ಗೋದಾಮು ಒಂದರಿಂದ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದರು. ಈ ವೇಳೆ, ಖಚಿತ‌ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, 50 ಕೆ.ಜಿ ತೂಕದ 80 ಚೀಲ ಅಕ್ಕಿ ವಶಪಡಿಸಿಕೊಂಡಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ನೀಡಿದ ಮಾಹಿತಿ ಆಧರಿಸಿ ಮತ್ತೆ ಗೋದಾಮಿನಲ್ಲಿದ್ದ 2 ಲಕ್ಷ 79 ಸಾವಿರ ಮೌಲ್ಯದ 126 ಕ್ವಿಂಟಾಲ್ ಅಕ್ಕಿ ಹಾಗೂ ಸಾಗಣೆಗೆ ಬಳಸುತ್ತಿದ್ದ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.