ETV Bharat / state

ಗದಗ ಜಿಲ್ಲೆಯಲ್ಲಿ ಅತಿವೃಷ್ಟಿಗೆ ಅಂದಾಜು 800 ಕೋಟಿ ರೂಪಾಯಿ ಹಾನಿ: ಬಿ.ಸಿ.ಪಾಟೀಲ್ - ಈಟಿವಿ ಭಾರತ್​ ಕನ್ನಡ

ಕರ್ತವ್ಯ ಮುಗಿಸಿ ವಾಪಸ್ ಬರುವಾಗ ಹಳ್ಳದ ನೀರಿನಲ್ಲಿ ಕೊಚ್ಚಿ ಹೋಗಿದ್ದ ಎರಡು ಪೊಲೀಸ್‌ ಕಾನ್ಸ್‌ಟೇಬಲ್‌ಗಳ ಕುಟುಂಬಕ್ಕೆ ತಲಾ 50 ಲಕ್ಷ ರೂ ಪರಿಹಾರ ನೀಡಲಾಗುವುದು ಎಂದು ಸಚಿವ ಬಿ.ಸಿ.ಪಾಟೀಲ್​ ಹೇಳಿದ್ದಾರೆ.

bc-patil-gave-information-about-crop-damage-in-gadag
ಸಚಿವ ಬಿ ಸಿ ಪಾಟೀಲ್
author img

By

Published : Sep 12, 2022, 8:39 AM IST

ಗದಗ: ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ಪ್ರವಾಹದಿಂದ ಅಧಿಕ ಪ್ರಮಾಣದ ಬೆಳೆ, ಮನೆ, ಸರ್ಕಾರಿ ಆಸ್ತಿ ಹಾನಿಗೊಳಗಾಗಿದೆ. ಹಾನಿಯ ಪ್ರಮಾಣವನ್ನು 811.26 ಕೋಟಿ ರೂ ಎಂದು ಅಂದಾಜಿಸಲಾಗಿದೆ. ಈ ಕುರಿತ ಸಮೀಕ್ಷಾ ಕಾರ್ಯ ಇನ್ನೂ ಪ್ರಗತಿಯಲ್ಲಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್​ ಹೇಳಿದರು.

ಸಚಿವ ಬಿ.ಸಿ.ಪಾಟೀಲ್ ಮಾಹಿತಿ

ನಗರದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಸಚಿವರು, ಕಳೆದ ತಿಂಗಳು ಜಿಲ್ಲೆಗೆ ಆಗಮಿಸಿದಾಗ ಜಿಲ್ಲೆಯಲ್ಲಿ 93 ಸಾವಿರ ಹೆಕ್ಟೇರ್ ಕೃಷಿ ಜಮೀನಿನಲ್ಲಿ ಬೆಳೆದ ಬೆಳೆ ಹಾನಿಯಾಗಿದೆ ಎಂದು ವರದಿಯಾಗಿತ್ತು. ಇದರಲ್ಲಿ 76 ಸಾವಿರ ಹೆಕ್ಟೇರ್ ಪ್ರದೇಶದ ಬೆಳೆಗಳ ವಿವರವನ್ನು ಪರಿಹಾರ ತಂತ್ರಾಂಶದಲ್ಲಿ ನೋಂದಾಯಿಸಲಾಗಿದೆ. ಸೆಪ್ಟೆಂಬರ್ 12 ರ ನಂತರ ಪರಿಹಾರ ಮೊತ್ತವನ್ನು ಅರ್ಹರಿಗೆ ನೀಡಲು ಮುಖ್ಯ ಮಂತ್ರಿಗಳು ಸೂಚಿಸಿದ್ದಾರೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಈವರೆಗೆ 7 ಜೀವ ಹಾನಿ ಸಂಭವಿಸಿದೆ. ಇದರಲ್ಲಿ 4 ಕುಟುಂಬಗಳಿಗೆ ತಲಾ 5 ಲಕ್ಷ ರೂ.ಯಂತೆ ಪರಿಹಾರ ವಿತರಿಸಲಾಗಿದೆ. ಒಟ್ಟು 59 ಜಾನುವಾರುಗಳ ಜೀವಹಾನಿ, 1,601 ಮನೆಗಳಿಗೆ ಹಾನಿಯಾಗಿದ್ದು 655 ಮನೆಗಳಿಗೆ ಮಾರ್ಗಸೂಚಿಗಳನ್ವಯ ಪರಿಹಾರ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಪೊಲೀಸ್​ ಕುಟುಂಬಕ್ಕೆ ತಲಾ 50 ಲಕ್ಷ ರೂ ಪರಿಹಾರ: ಕರ್ತವ್ಯ ಮುಗಿಸಿ ವಾಪಸ್ ಬರುವಾಗ ಹಳ್ಳದ ನೀರಿನಲ್ಲಿ ಕೊಚ್ಚಿ ಹೋಗಿದ್ದ ಮುಂಡರಗಿ ಪೊಲೀಸ್ ಠಾಣೆಯ ಮಹೇಶ್ ಹಾಗೂ ನಿಂಗಪ್ಪ ಎಂಬ ಪೊಲೀಸ್ ಕಾನ್ಸ್‌ಸ್ಟೇಬಲ್ ಕುಟುಂಬಗಳಿಗೆ ತಲಾ 50 ಲಕ್ಷ ರೂ.ವರೆಗೆ ಪರಿಹಾರ ಸಿಗಲಿದೆ ಎಂದು ಸಚಿವರು ತಿಳಿಸಿದರು.

ಸೆಪ್ಟೆಂಬರ್ 5 ರಂದು ಮುಂಡರಗಿ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್‌ಗಳಾದ ಮಹೇಶ್, ನಿಂಗಪ್ಪ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಬಂಡಿಹಾಳ ಗ್ರಾಮದಲ್ಲಿ ವ್ಯಾಪ್ತಿಯ ಹಳ್ಳದಲ್ಲಿ ನಾಪತ್ತೆಯಾಗಿದ್ದರು. ಹುಡುಕಾಟ ನಡೆಸಿದ್ದ ಅಗ್ನಿಶಾಮಕ ಸಿಬ್ಬಂದಿಗೆ ದಿನಾಂಕ ಸೆಪ್ಟೆಂಬರ್ 6 ರಂದು ಮೃತದೇಹಗಳು ಸಿಕ್ಕಿದ್ದವು.

ಇದನ್ನೂ ಓದಿ: ಬೆಳಗಾವಿ ಜಿಲ್ಲೆಯಲ್ಲಿ ಎರಡು, ಚಿಕ್ಕೋಡಿ ಉಪವಿಭಾಗದಲ್ಲಿ ಐದು ಸೇತುಗಳು ಮುಳುಗಡೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.