ಗದಗ : ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸವಾರನೊರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನರಗುಂದ ತಾಲೂಕಿನ ಶಿರೋಳ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಬೈಕ್ ಸವಾರ ಯಲ್ಲಪ್ಪ ಮೃತ ದುರ್ದೈವಿಯಾಗಿದ್ದು, ಈತ ರಡ್ಡೆರ ನಾಗನೂರು ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ. ಗಂಭೀರವಾಗಿ ಗಾಯಗೊಂಡ ಹಿಂಬದಿಯ ಸವಾರನನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಡ್ಡೆರನಾಗನೂರು - ಶಿರೋಳ ರಸ್ತೆಯ ಮಧ್ಯೆ ಈ ಅಪಘಾತ ನಡೆದಿದ್ದು, ಸ್ಥಳಕ್ಕೆ ನರಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.