ETV Bharat / state

ರಾತ್ರಿ ಬೈಕ್ ಕದಿಯುವಾಗ ಸಿಕ್ಕಿಬಿದ್ದ ಕಳ್ಳ: ಸಾರ್ವಜನಿಕರಿಂದ ಬಿತ್ತು ಗೂಸಾ... - ನಕಲಿ ಕೀ ಬಳಸಿ ಬೈಕ್​ ಕಳ್ಳತನ ಪ್ರಕರಣ

ಗದಗ ಜಿಲ್ಲೆಯ ಟ್ಯಾಗೋರ್ ರಸ್ತೆಯಲ್ಲಿ ನಕಲಿ ಕೀ ಬಳಸಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಹಾಗೂ ಪೆಟ್ರೋಲ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಸ್ಥಳಿಯರೇ ಹಿಡಿದು, ಹೊಡೆದು ಪೊಲೀಸರಿಗೊಪ್ಪಿಸಿದ್ದಾರೆ.

bike thief arrested in gadag
ಸಿಕ್ಕಿಬಿದ್ದ ಕಳ್ಳ
author img

By

Published : Nov 15, 2020, 2:48 PM IST

ಗದಗ: ರಾತ್ರೋರಾತ್ರಿ ಬೈಕ್‌ ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ಹಿಡಿದು ಮರಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಗದಗ ನಗರದಲ್ಲಿ ನಡೆದಿದೆ.‌

ಸಿಕ್ಕಿಬಿದ್ದ ಕಳ್ಳ

ನಗರದ ಟ್ಯಾಗೋರ್ ರಸ್ತೆಯಲ್ಲಿ ಕುಮಾರ ನರ್ತಿ ಎಂಬ ಕಳ್ಳನನ್ನು ಸ್ಥಳೀಯರು ಹಿಡಿದು ಥಳಿಸಿದ್ದಾರೆ. ನಕಲಿ ಕೀ ಬಳಸಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಹಾಗೂ ಪೆಟ್ರೋಲ್ ಕಳ್ಳತನ ಮಾಡುತ್ತಿದ್ದ. ಶರಣು ಪಾಟೀಲ್ ಎಂಬುವರಿಗೆ ಸೇರಿದ ಸ್ಕೂಟಿ ಕಳ್ಳತನ ಮಾಡುವ ವೇಳೆ ಸಿಕ್ಕಿ ಬಿದ್ದಿದ್ದಾನೆ. ಬೆಳಗಿನ ಜಾವ ಸ್ಕೂಟಿ ಕಳ್ಳತನ ಮಾಡಿಕೊಂಡು ಪರಾರಿಯಾಗುವ ವೇಳೆ ಸ್ಥಳೀಯರು ಅನುಮಾನಗೊಂಡು ಹಿಡಿದು ಮರಕ್ಕೆ ಕಟ್ಟಿಹಾಕಿ ಹೊಡೆದು ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ.

ಗದಗನ ಬೆಟಗೇರಿ ಬಡಾವಣೆ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೆ ಮುಂದಾಗಿದ್ದಾರೆ. ಗದಗ ನಗರದಲ್ಲಿ ಟ್ಯಾಗೋರ್ ರಸ್ತೆ ಸೇರಿದಂತೆ ಅನೇಕ‌ ಕಡೆಗಳಲ್ಲಿ ಇಂತಹ ಪ್ರಕರಣಗಳು ನಡೆಯತ್ತಲೇ ಇವೆ. ಸಂಬಂಧಿಸಿದ ಅಧಿಕಾರಿಗಳು ಪತ್ತೆ ಹಚ್ಚಿ ಶಿಸ್ತು ಕ್ರಮ ಜರುಗಿಸಬೇಕು ಅಂತಾ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.