ಗದಗ: ಸ್ನೇಹಿತರೊಂದಿಗೆ ಈಜಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಮೇವುಂಡಿ ಗ್ರಾಮದಲ್ಲಿ ನಡೆದಿದೆ.
ಚನ್ನವೀರಗೌಡ (14 ) ಮೃತ ಬಾಲಕ. ನಿನ್ನೆ ಮಧ್ಯಾಹ್ನ ಸ್ನೇಹಿತರೊಂದಿಗೆ ಹಿರೇಹಳ್ಳಕ್ಕೆ ಈಜಲು ಹೋಗಿದ್ದ. ಈ ವೇಳೆ ಆಳವಾದ ನೀರಿಗೆ ಧುಮುಕಿದ ಬಾಲಕ ಈಜು ಬಾರದೆ ಮುಳುಗಿ ಸಾವನ್ನಪ್ಪಿದ್ದಾನೆ. ಈಜಲು ಹೋದ ಗೆಳೆಯರು ಗ್ರಾಮದಲ್ಲಿ ಮಾಹಿತಿ ನೀಡಿದ ಹಿನ್ನೆಲೆ ಗ್ರಾಮಸ್ಥರು ಹಾಗೂ ಮೃತ ಬಾಲಕನ ಕುಟುಂಬಸ್ಥರು ಹಿರೇಹಳ್ಳದ ಬಳಿ ಹೋಗಿ ನಿನ್ನೆಯಿಂದ ಮೃತದೇಹ ಪತ್ತೆಗಾಗಿ ಶೋಧ ಕಾರ್ಯ ನಡೆಸಿದ್ದರು.
ಅಗ್ನಿಶಾಮಕ ದಳದ ಸಿಬ್ಬಂದಿ, ಮೀನುಗಾರರು ಹಾಗೂ ಸ್ಥಳೀಯ ಈಜುಗಾರರು ಇಂದು ಮೃತದೇಹ ಹೊರ ತೆಗೆದಿದ್ದಾರೆ. ಸ್ಥಳಕ್ಕೆ ಮುಂಡರಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.