ಗದಗ : ಯಾರೋ ಕಿಡಿಗೇಡಿಗಳು ಮೇವಿನ ಬಣವೆಗೆ ಬೆಂಕಿ ಹಚ್ಚಿರುವ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಅಡರಕಟ್ಟಿ ಗ್ರಾಮದಲ್ಲಿ ನಡೆದಿದೆ.
ಬೆಳಗಿನ ಜಾವ ಸುರೇಶ ತೋಟದ ಎಂಬ ರೈತನಿಗೆ ಸೇರಿದ ಬಣವೆಗೆ ಬೆಂಕಿ ಬಿದ್ದಿದೆ. ಇದು ಯಾರೋ ಕಿಡಿಗೇಡಿಗಳು ಮಾಡಿದ ಕೃತ್ಯ ಎನ್ನಲಾಗುತ್ತಿದೆ. ಊರ ಪಕ್ಕದ ಜಮೀನಿನಲ್ಲಿ ಸುಮಾರು 80 ಸಾವಿರ ಮೌಲ್ಯದ ಮೇವು ಸಂಗ್ರಹಿಸಲಾಗಿತ್ತು. ಆದರೆ, ಬೆಳಗ್ಗೆ ಎದ್ದು ನೋಡುವ ಹೊತ್ತಿಗೆ ಬೆಂಕಿಯ ಕೆನ್ನಾಲಿಗೆಗೆ ಬಣವೆ ಸುಟ್ಟು ಕರಕಲಾಗಿದೆ.
ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ,ಪರಿಶೀಲನೆ ನಡೆಸಿದ್ದಾರೆ. ಕೊಳ್ಳಿ ಇಟ್ಟ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.