ಗದಗ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಪಲ್ಟಿಯಾದ ಪರಿಣಾಮ 10 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತಾಲೂಕಿನ ನಾರಾಯಣಪುರ ಗ್ರಾಮದ ಬಳಿ ಬೆಳಗ್ಗೆ ಸಂಭವಿಸಿದೆ.
ಕಲಬುರಗಿಯಿಂದ ಧಾರವಾಡಕ್ಕೆ ಹೊರಟಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ಸಂಜೀವ್ ಕುಮಾರ್, ಮೊಹ್ಮದ್ ಹರ್ಷದ್, ಮಳೇಂದ್ರಯ್ಯ, ಕೇದಾರನಾಥ, ವಾಸುದೇವ ರಾವ್, ಭೀಮರೆಡ್ಡಿ, ಭಾಗ್ಯವಂತ, ತೀರ್ಥರಾಜ, ಮಂಜುನಾಥ ಸೇರಿದಂತೆ 10 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಬಸ್ನಲ್ಲಿ ಒಟ್ಟು 21 ಜನ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಗದಗ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.