ETV Bharat / state

ಹೋರಾಟ - ತ್ಯಾಗ - ಬಲಿದಾನಗಳಿಂದ ಕನ್ನಡ ನಾಡು ಉದಯವಾಗಿದೆ: ಸಿಎಂ ಸಿದ್ದರಾಮಯ್ಯ

ಕನ್ನಡ ಕಲಿಯದೆಯೂ ಕರ್ನಾಟಕದಲ್ಲಿ ವ್ಯವಹರಿಸಬಹುದು ಎನ್ನುವ ವಾತಾವರಣ ಬದಲಾಗಬೇಕು. ನಮ್ಮೆಲ್ಲರಲ್ಲಿ ಕನ್ನಡತನ ಬೇರೂರಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Etv Bharatcm-siddaramaiah-speech-in-50th-year-karnataka-celebration
ಹೋರಾಟ-ತ್ಯಾಗ-ಬಲಿದಾನಗಳಿಂದ ಕನ್ನಡ ನಾಡು ಉದಯವಾಗಿದೆ: ಸಿಎಂ ಸಿದ್ದರಾಮಯ್ಯ
author img

By ETV Bharat Karnataka Team

Published : Nov 3, 2023, 4:57 PM IST

ಗದಗದಲ್ಲಿ ಕನ್ನಡ ಜ್ಯೋತಿಗೆ ಅದ್ಧೂರಿ ಸ್ವಾಗತ

ಗದಗ: "ಹೋರಾಟ-ತ್ಯಾಗ-ಬಲಿದಾನಗಳಿಂದ ಕನ್ನಡ ನಾಡು ಉದಯವಾಗಿದೆ. ಈ ನಾಡಲ್ಲಿ ಕನ್ನಡತ್ವ ಮತ್ತಷ್ಟು ಆಳವಾಗಿ ಬೇರೂರಬೇಕು" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಗದಗದಲ್ಲಿ "ಕರ್ನಾಟಕ ಸಂಭ್ರಮ-50" ಅದ್ದೂರಿ ಕಾರ್ಯಕ್ರಮವನ್ನು ವೈಭವದ ವೇದಿಕೆಯಲ್ಲಿ ಉದ್ಘಾಟಿಸಿ ಮಾತನಾಡಿದ ಅವರು, "ಕರ್ನಾಟಕ ಎಂದು ನಾಮಕರಣ ಆಗಲು ಶ್ರಮಿಸಿ ಹೋರಾಡಿದ ಕೆ.ಹೆಚ್.ಪಾಟೀಲ್ ಮತ್ತು ಎಲ್ಲ ಹೋರಾಟದ ಸಂಗಾತಿಗಳನ್ನು ಇಂದು ನಾನು ಸ್ಮರಿಸುತ್ತೇನೆ. ಅವತ್ತು ಕೆ.ಹೆಚ್.ಪಾಟೀಲ್, ಇಂದು ಹೆಚ್.ಕೆ.ಪಾಟೀಲ್. ಅವತ್ತು ದೇವರಾಜ ಅರಸು ಕುಳಿತಿದ್ದ ಮುಖ್ಯಮಂತ್ರಿ ಕುರ್ಚಿಯಲ್ಲಿ ಇವತ್ತು ನಾನು ಕುಳಿತಿದ್ದೇನೆ. ಇದೇನು ಕಾಕತಾಳೀಯವಲ್ಲ" ಎಂದರು.

"ಇಂಗ್ಲಿಷ್​ನಲ್ಲಿ ಶೇಕ್ಸ್ ಪಿಯರ್ ಸಾಹಿತ್ಯ ರಚಿಸುವುದಕ್ಕೂ 500 ವರ್ಷಗಳ ಮೊದಲೇ ಕನ್ನಡದಲ್ಲಿ ವಿಶ್ವ ಮಟ್ಟದ ಅತ್ಯುನ್ನತ ಸಾಹಿತ್ಯ ರಚನೆಯಾಗಿತ್ತು. ಪಂಪನಿಂದ ಹಿಡಿದು ವಚನಕಾರರನ್ನೂ ಸೇರಿಸಿ ಹಲವರು ಅತ್ಯುನ್ನತ ಸಾಹಿತ್ಯ ರಚಿಸಿದ್ದರು ಎಂದು ಕನ್ನಡ ಭಾಷಾ ಹಿರಿಮೆಯನ್ನು ಉದಹರಿಸಿದರು.
ಕನ್ನಡ ಕಲಿಯದೆಯೂ ಕರ್ನಾಟಕದಲ್ಲಿ ವ್ಯವಹರಿಸಬಹುದು ಎನ್ನುವ ವಾತಾವರಣ ಬದಲಾಗಬೇಕು. ಕನ್ನಡದ ಸಂಸ್ಕೃತಿ ಜತೆಗೆ ನಮ್ಮೆಲ್ಲರಲ್ಲಿ ಕನ್ನಡತನ ಬೇರೂರಬೇಕು. ಆಗ ಮಾತ್ರ ಕನ್ನಡದ ವಾತಾವರಣ ಇಡಿ ನಾಡಿನಲ್ಲಿ ಪಸರಿಸುತ್ತದೆ" ಎಂದು ಹೇಳಿದರು.

"ಕನ್ನಡ ಸಂಸ್ಕೃತಿ ಎಂದಾಗ ಬಸವಾದಿ ಶರಣರ ಕಾಯಕ ಸಂಸ್ಕೃತಿಯೂ ಸೇರಿದೆ. ಬಸವಣ್ಣನವರ ಆಶಯದಂತೆ ವರ್ಗರಹಿತ, ಜಾತಿರಹಿತ ಸಮಾಜದ ನಿರ್ಮಾಣ ಮತ್ತು ಈ ಸಮಾಜದ ಅಭಿವೃದ್ಧಿ ನಮ್ಮ ಗುರಿಯಾಗಿದೆ. ಆ ಕಾರಣಕ್ಕೇ ಸರ್ವ ಜಾತಿ-ಧರ್ಮದವರ ಬದುಕನ್ನು ಎತ್ತರಿಸುವ ಗ್ಯಾರಂಟಿ ಕಾರ್ಯಕ್ರಮಗಳನ್ನು ನಾವು ನೀಡಿದ್ದೇವೆ" ಎಂದರು.

ಅವಳಿ ನಗರಕ್ಕೆ 61 ಕೋಟಿ ಕೊಟ್ಟಿದ್ದೇವೆ: "ಗದಗ-ಬೆಟಗೇರಿ ಅವಳಿ ನಗರದ ಕುಡಿಯುವ ನೀರಿನ ವ್ಯವಸ್ಥೆಯನ್ನು ಇನ್ನಷ್ಟು ಸಮರ್ಪಕಗೊಳಿಸಲು ಈಗಾಗಲೇ 61 ಕೋಟಿ ನೀಡಿದ್ದೇವೆ. ಅಗತ್ಯಬಿದ್ದರೆ ಮತ್ತಷ್ಟು ಹಣ ಕೊಡಲು ನಮ್ಮ ಸರ್ಕಾರ ಸಿದ್ಧವಿದೆ" ಎಂದು ಭರವಸೆ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರಚಾಸೋದ್ಯಮ ಇಲಾಖೆ ಮತ್ತು ಗದಗ ಜಿಲ್ಲಾಡಳಿತ ಜಂಟಿಯಾಗಿ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರವಾಸೋದ್ಯಮ ಸಚಿವರೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಡಾ.ಹೆಚ್.ಕೆ.ಪಾಟೀಲ್ ಅವರು ವಹಿಸಿದ್ದರು.

ಗದಗದಲ್ಲಿ ಸಿಎಂಗೆ ಅದ್ಧೂರಿ ಸ್ವಾಗತ: ಇದಕ್ಕೂ ಮೊದಲು ಹಂಪಿಯಿಂದ ಗದಗಕ್ಕೆ ಆಗಮಿಸಿದ್ದ ಕನ್ನಡ ಜ್ಯೋತಿಯನ್ನು ಬರಮಾಡಿಕೊಳ್ಳಲು ನಗರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿದರು. ಬಳಿಕ ಅವರು ವೀರನಾರಾಯಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ದೇವರ ದರ್ಶನ ಪಡೆದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್, ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಸಚಿವರಾದ ಕೆ.ಹೆಚ್.ಮುನಿಯಪ್ಪ, ಶಿವರಾಜ ತಂಗಡಗಿ, ಲಕ್ಷ್ಮೀ ಹೆಬ್ಬಾಳ್ಕರ್, ಬೈರತಿ ಸುರೇಶ್, ಮಂಕಳ ವೈದ್ಯ, ಶರಣ ಪ್ರಕಾಶ್ ಪಾಟೀಲ್, ಶಿವಾನಂದ ಪಾಟೀಲ್, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ಸೇರಿ ಹಲವಾರು ಶಾಸಕರು, ಇಲಾಖಾ ಕಾರ್ಯದರ್ಶಿಗಳು-ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ನಮ್ಮ ವಿರುದ್ಧದ ಪ್ರಕರಣಗಳನ್ನ ಹಿಂಪಡೆಯಿರಿ: ಬೆಳಗಾವಿ ಕನ್ನಡ ಪರ ಹೋರಾಟಗಾರರ ಆಗ್ರಹ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.