ETV Bharat / state

ಯಾವುದೇ ಶಕ್ತಿ ಬಂದರೂ ಕುಡಿಯುವ ನೀರು ಕೊಡುವುದನ್ನು ತಡೆಯಲು ಸಾಧ್ಯವಿಲ್ಲ : ಸಿಎಂ ಬಸವರಾಜ ಬೊಮ್ಮಾಯಿ

ರೋಣದಲ್ಲಿ ಕೇಂದ್ರ, ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನ - ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಸಿಎಂ ಬೊಮ್ಮಾಯಿ - ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ 941 ಕೋಟಿ ರೂ ಮಂಜೂರು

conference-of-beneficiaries-of-govt-schemes-and-cm-bommai-program-at-gadag
ಯಾವುದೇ ಶಕ್ತಿ ಬಂದರೂ ಕುಡಿಯುವ ನೀರು ಕೊಡುವುದನ್ನು ತಡೆಯಲು ಸಾಧ್ಯವಿಲ್ಲ : ಸಿಎಂ ಬಸವರಾಜ ಬೊಮ್ಮಾಯಿ
author img

By

Published : Mar 13, 2023, 10:03 PM IST

ಗದಗ : ಜನ ಮೂಲ ಸೌಲಭ್ಯಗಳನ್ನು ನೀಡಲು ನಮ್ಮನ್ನು ಆಯ್ಕೆ ಮಾಡಿದ್ದಾರೆ. ಜಗತ್ತಿನ ಯಾವುದೇ ಶಕ್ತಿ ಬಂದರೂ ಜನರಿಗೆ ಕುಡಿಯುವ ನೀರು ನೀಡುವುದನ್ನು ತಡೆಯಲು ಸಾಧ್ಯವಿಲ್ಲ. ಜನಶಕ್ತಿ ಮುಂದೆ ಯಾವ ಶಕ್ತಿಯೂ ನಿಲ್ಲಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ರೋಣ ತಾಲೂಕಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನ ಮತ್ತು ರೋಣದಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಗದಗ ಜಿಲ್ಲೆಯ ಮೂರು ಪ್ರಮುಖ ನಗರಗಳಾದ ರೋಣ, ಗಜೇಂದ್ರಗಡ ಹಾಗೂ ನರೇಗಲ್​ಗೆ ಫ್ಲೋರೈಡ್ ಮುಕ್ತ ನೀರಿನ ಸೌಲಭ್ಯ ಕಲ್ಪಿಸಲಾಗಿದೆ. ರೋಣದಲ್ಲಿ 46 ಕೋಟಿ ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆ ಮಾಡಲಾಗಿದೆ. ನರೇಗಲ್ ಮತ್ತು ಗಜೇಂದ್ರ ಗಡಕ್ಕೆ 69 ಕೋಟಿ ರೂ.ಗಳ ವೆಚ್ಚದಲ್ಲಿ ನೀರಿನ ಸೌಲಭ್ಯ ಕಲ್ಪಿಸಲಾಗಿದೆ. ಮೂರೂ ನಗರಗಳಿಗೆ ಶುದ್ಧವಾದ ಸಂಸ್ಕರಿಸಿದ ನೀರು ಒದಗಿಸುವ ಯೋಜನೆ ಉದ್ಘಾಟಿಸಿರುವುದು ಸಂತಸ ತಂದಿದೆ ಎಂದರು. ಈ ಯೋಜನೆ 2009ರಲ್ಲಿ ಪ್ರಾರಂಭವಾದರೂ, ಮುಂದುವರೆದಿರಲಿಲ್ಲ. ಮಲಪ್ರಭ ನದಿ ನೀರನ್ನು ಶುದ್ದೀಕರಿಸಿ ಫ್ಲೋರೈಡ್ ಮುಕ್ತ ನೀರನ್ನು ಸರಬರಾಜು ಮಾಡುವ ಕಾರ್ಯವನ್ನು ಇಂದಿನಿಂದ ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.

ಡಬಲ್ ಇಂಜಿನ್ ಸರ್ಕಾರದ ಬದ್ಧತೆ : ಮೂರು ವರ್ಷದ ಹಿಂದೆ ಕೆಂಪುಕೋಟೆಯ ಮೇಲೆ ಪ್ರತಿ ಮನೆಗೆ ಕುಡಿಯುವ ನೀರು ಕೊಡುವುದಾಗಿ ಪ್ರಧಾನಿ ಘೋಷಿಸಿದ್ದರು‌. ಈ ಮೂರು ವರ್ಷದಲ್ಲಿ, 12 ಕೋಟಿ ಮನೆಗಳಿಗೆ ಹೊಸದಾಗಿ ನೀರು ಕೊಟ್ಡಿದ್ದಾರೆ. ನಮ್ಮ ರಾಜ್ಯದಲ್ಲಿ 72 ವರ್ಷಗಳವರೆಗೂ ಕೇವಲ 7 ಕೋಟಿ ಮನೆಗಳಿಗೆ ನೀರಿನ ಸೌಲಭ್ಯವಿತ್ತು. ಮೂರು ವರ್ಷಗಳಲ್ಲಿ 12 ಕೋಟಿ ಮನೆಗಳಿಗೆ ನಲ್ಲಿ ನೀರು ಸಂಪರ್ಕ ಕಲ್ಪಿಸಿದವರು ಪ್ರಧಾನಿ ನರೇಂದ್ರ ಮೋದಿ. ರಾಜ್ಯದಲ್ಲಿ ಕೇವಲ 25 ಲಕ್ಷ ಮನೆಗಳಿಗೆ 75 ವರ್ಷಗಳಲ್ಲಿ ನೀರಿನ ಸಂಪರ್ಕ ನೀಡಲಾಗಿತ್ತು. ನಮ್ಮ ಸರ್ಕಾರ ಮೂರು ವರ್ಷದಲ್ಲಿ 40 ಲಕ್ಷ ಮನೆಗಳಿಗೆ ನೀರಿನ ಸಂಪರ್ಕ ಕಲ್ಪಿಸಿದೆ. ಇದು ಡಬಲ್ ಇಂಜಿನ್ ಸರ್ಕಾರದ ಬದ್ಧತೆ. ಜಲ್ ಜೀವನ್ ಮಿಷನ್, ಅಮೃತ್ ಯೋಜನೆ ಹಾಗೂ ಬಹು ಗ್ರಾಮ ಕುಡಿಯುವ ನೀರು ಯೋಜನೆಯಲ್ಲಿ ಇದನ್ನು ಕೈಗೊಳ್ಳಲಾಗಿದೆ ಎಂದರು.

conference-of-beneficiaries-of-govt-schemes-and-cm-bommai-program-at-gadag
ಫಲಾನುಭವಿಗಳ ಸಮ್ಮೇಳನ

ವಿಳಂಬರಹಿತ ಪ್ರಗತಿ ಸಾಧಿಸುವುದೇ ಸರ್ಕಾರದ ಗುರಿ : ಜನ ಮೂಲ ಸೌಲಭ್ಯಗಳನ್ನು ನೀಡಲು ನಮ್ಮನ್ನು ಆಯ್ಕೆ ಮಾಡಿದ್ದಾರೆ. ಯಾವಾಗಲೂ ಜನರ ಇಚ್ಛಾಶಕ್ತಿ ಗೆದ್ದಿದೆ. ಅಭಿವೃದ್ಧಿ ನಿರಂತರವಾಗಿ ನಡೆಯುವ ಪ್ರಕ್ರಿಯೆ. ಸಮಯ ಮತ್ತು ಅಭಿವೃದ್ಧಿ ಎರಡೂ ಒಟ್ಟಿಗೆ ಸಾಗಬೇಕು. ಕಾಲಮಿತಿಯಲ್ಲೇ ಕೆಲಸಗಳು ಆಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಳಂಬರಹಿತ ಪ್ರಗತಿ ಸಾಧಿಸುವುದೇ ನಮ್ಮ ಸರ್ಕಾರದ ಗುರಿ ಎಂದರು.

ರಾಜ್ಯದ 3 ಲಕ್ಷ ಕುಟುಂಬಗಳಿಗೆ ಬೆಳಕು ಕಾರ್ಯಕ್ರಮ : ಗದಗ ಜಿಲ್ಲೆಯಲ್ಲಿ ವಿದ್ಯುತ್ ಸೌಲಭ್ಯವಿಲ್ಲದ 8092 ಕುಟುಂಬಗಳಿಗೆ ಹಾಗೂ ಇಡೀ ರಾಜ್ಯದಲ್ಲಿ ಸುಮಾರು 3 ಲಕ್ಷ ಕುಟುಂಬಗಳಿಗೆ ಬೆಳಕು ನೀಡುವ ಕಾರ್ಯಕ್ರಮವನ್ನು ಮಾಡಲಾಗಿದೆ. ಸ್ತ್ರೀ ಸಾಮರ್ಥ್ಯ ಯೋಜನೆಯಡಿ 10 ಸಾವಿರ ಮಹಿಳಾ ಸಂಘಗಳಿಗೆ ತಲಾ 1 ಲಕ್ಷದಂತೆ ಡಿಬಿಟಿ ಮಾಡಲಾಗಿದ್ದು, ಗ್ರಾಮದ ತಲಾ ಎರಡು ಸ್ತೀಶಕ್ತಿ ಸಂಘಗಳಿಗೆ ಒಟ್ಟು 5 ಲಕ್ಷ ರೂ. ಆರ್ಥಿಕ ನೆರವನ್ನು ನೀಡಲಾಗುತ್ತದೆ. ಎರಡನೇ ಹಂತದ ಯೋಜನೆಯನ್ನು ಶೀಘ್ರದಲ್ಲಿ ಬಿಡುಗಡೆ ಮಾಡಲಾಗುವುದು. ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯನ್ನೂ ಸರ್ಕಾರ ಜಾರಿಗೊಳಿಸಿದ್ದು, ಮಹಿಳೆಯರು ಹಾಗೂ ಯುವಕರ ಸ್ವಾವಲಂಬನೆ ಹಾಗೂ ಸ್ವಾಭಿಮಾನದ ಬದುಕನ್ನು ಬದುಕಬೇಕೆನ್ನುವುದು ಸರ್ಕಾರದ ಆಶಯ. ಕೃಷಿ ಕಾರ್ಮಿಕ ಮಹಿಳೆಯರಿಗೆ 1000 ರೂ. ಆರ್ಥಿಕ ಸಹಾಯ ನೀಡುವ ಯೋಜನೆ ರೂಪಿಸಲಾಗಿದೆ ಎಂದರು.

ರಾಜ್ಯದ 3 ಲಕ್ಷ ಕುಟುಂಬಗಳಿಗೆ ಬೆಳಕು ಕಾರ್ಯಕ್ರಮ

2000 ಶಾಲಾ ಬಸ್ ಸೇವೆ : ಜನರ ಸಮಸ್ಯೆಗಳನ್ನು ನಿವಾರಿಸುವ ಸ್ಪಂದನಾಶೀಲ ಸರ್ಕಾರ ನಮ್ಮದಾಗಿದೆ. ಆರೋಗ್ಯ ಕ್ಷೇತ್ರದಲ್ಲಿ ಡಯಾಲಿಸಿಸ್ ಸೆಂಟರ್​ ಹೆಚ್ಚಳ, ಕಿಮೋಥೆರಪಿ ಕೇಂದ್ರ ಹೆಚ್ಚಿಸಲಾಗಿದೆ. ಕಿವುಡರಿಗೆ ಶ್ರವಣ ಸಾಧನಕ್ಕೆ ಸಹಾಯಕ್ಕೆ 500 ಕೋಟಿ ರೂ. ನಿಗದಿಪಡಿಸಿದೆ. ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ಶಾಲೆಗೆ ತೆರಳಲು 2000 ಶಾಲಾ ಬಸ್ ಸೇವೆಯನ್ನು ಪ್ರಾರಂಭಿಸಲಾಗುವುದು. ಹೆಣ್ಣುಮಕ್ಕಳಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ ಮಾಡಲಾಗುವುದು. ಐಟಿಐಯಲ್ಲಿ, ಪಿಯುಸಿಯಲ್ಲಿ ಅನುತೀರ್ಣರಾದ ಯುವಕರಿಗೆ ತರಬೇತಿ ಹಾಗೂ 6 ತಿಂಗಳವರೆಗೆ 1500 ರೂ. ಭತ್ಯೆ ನೀಡಿ ಉದ್ಯೋಗ ಒದಗಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ದುಡಿಯುವ ವರ್ಗಕ್ಕೆ ಬೆಂಬಲ ನೀಡುವುದು ಸರ್ಕಾರದ ಆದ್ಯತೆಯಾಗಿದೆ. ನಾಡನ್ನು ಕಟ್ಟುವುದು ದುಡಿಯುವ ವರ್ಗ ಎಂದರು.

ರೋಣದಲ್ಲಿ ಕೇಂದ್ರ, ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನ

ಹಾಸ್ಟೆಲ್ ಗಳ ಸಾಮರ್ಥ್ಯ ಹೆಚ್ಚಳ : 250 ಕೋಟಿ ರೂ. ವೆಚ್ಚದಲ್ಲಿ ಹಿಂದುಳಿದ ವರ್ಗದ ಹಾಸ್ಟೆಲ್​​​​ಗಳ ಸಾಮರ್ಥ್ಯ ಹೆಚ್ಚಿಸಿ, 30 ಸಾವಿರ ಒಬಿಸಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲ ಕಲ್ಪಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 1 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ. ನೇಕಾರರಿಗೆ ವಿದ್ಯುತ್ ಸಬ್ಸಿಡಿ, 2 ಲಕ್ಷದವರೆಗೆ ಸಾಲಸೌಲಭ್ಯ, ಸಹಾಯಧನ, 350 ಕೋಟಿ ರೂ. ವೆಚ್ಚದಲ್ಲಿ ಕುರಿಗಾಹಿಗಳ ಸಂಘಕ್ಕೆ 20 ಕುರಿ 1 ಮೇಕೆ ನೀಡಲಾಗುತ್ತಿದೆ. ಎಸ್ ಸಿ ಎಸ್ ಟಿ ಮೀಸಲಾತಿ ಹೆಚ್ಚಿಸಲಾಗಿದೆ. ಸಂವಿಧಾನದ 9 ನೇ ಶೆಡ್ಯೂಲ್ ಗೆ ಈ ಹೆಚ್ಚಳವನ್ನು ಸೇರಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಸರ್ಕಾರದ ಸೌಲಭ್ಯಗಳ ಬಗ್ಗೆ ಬೆಳಕು ಚೆಲ್ಲಿ , ಇನ್ನಷ್ಟು ಜನರು ಸರ್ಕಾರದ ಯೋಜನೆಗಳ ಲಾಭ ಪಡೆಯಬೇಕೆನ್ನುವ ಉದ್ದೇಶದಿಂದ ಫಲಾನುಭವಿಗಳ ಸಮ್ಮೇಳನ ಏರ್ಪಡಿಸಲಾಗುತ್ತಿದೆ ಎಂದರು.

ಕೇಂದ್ರ ಸರ್ಕಾರದಿಂದ 941 ಕೋಟಿ ರೂ ಮಂಜೂರು : ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿ ರಾಜ್ಯಕ್ಕೆ ಹೆಚ್ಚುವರಿಯಾಗಿ 941 ಕೋಟಿಯನ್ನು ಮಂಜೂರು ಮಾಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಧನ್ಯವಾದ ತಿಳಿಸಿದ್ದಾರೆ.

2022ರ ಅವಧಿಯಲ್ಲಿ ಉಂಟಾದ ಪ್ರವಾಹ, ಭೂ ಕುಸಿತ, ಅತಿವೃಷ್ಟಿಯಿಂದ ಹಾನಿಗೊಳಗಾಗಿದ್ದ ರಾಜ್ಯಕ್ಕೆ, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು, ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿಯಲ್ಲಿ ಹೆಚ್ಚುವರಿಯಾಗಿ ₹941.04 ಕೋಟಿಯನ್ನು ಮಂಜೂರು ಮಾಡಿದೆ. ಕರ್ನಾಟಕದ ಬಗೆಗಿನ ವಿಶೇಷ ಕಾಳಜಿಗಾಗಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ : ಕೋಟೆ ಭದ್ರಕ್ಕೆ ಕೇಸರಿ ತಂತ್ರ, ಕ್ಷೇತ್ರ ಕೈವಶಕ್ಕೆ ಕಾಂಗ್ರೆಸ್ ಪ್ರತಿತಂತ್ರ: ದಳಪತಿಗಳ ಮೈಂಡ್​ಗೇಮ್ ನಡುವೆ ಯಾರಾಗುತ್ತಾರೆ ಮಲ್ಲೇಶ್ವರ ಶಾಸಕ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.