ಗದಗ: ಕಾಂಗ್ರೆಸ್ ಪಕ್ಷವು ಉಗ್ರರನ್ನು ಬೆಂಬಲಿಸುವ ಪಕ್ಷವಾಗಿದ್ದು, ಆ ಪಕ್ಷದ ನಾಯಕರು ಪಿಎಫ್ಐ, ಎಸ್ಡಿಪಿಐ ಸಂಘಟನೆಗಳಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ಸಚಿವ ಶ್ರೀರಾಮಲು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಗದಗ ನಗರದ ಅವರ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವ ಕಾರಣಕ್ಕೆ ಬೆಂಬಲಿಸುತ್ತಿದ್ದಾರೆ ಅಂತ ಗೊತ್ತಾಗುತ್ತಿಲ್ಲ. ಯಾಕಂದ್ರೆ ಅವರದೇ ಪಕ್ಷದ ಶಾಸಕರಾದ ತನ್ವೀರ್ ಸೇಠ್, ಹ್ಯಾರಿಸ್ ಹತ್ಯೆಗೆ ಪ್ರಯತ್ನ ಮಾಡಿದ್ರು. ಇಷ್ಟೊಂದು ಅಹಿತಕರ ಘಟನೆ ನಡೆದ್ರೂ, ಯಾಕೆ ಬೆಂಬಲ ನೀಡುತ್ತಿದ್ದಾರೆ ಎಂದು ಗೋತ್ತಾಗುತ್ತಿಲ್ಲ ಎಂದು ಕಿಡಿ ಕಾರಿದ್ರು. ಕಾಂಗ್ರೆಸ್ ಓಟ್ ಬ್ಯಾಂಕ್ಗಾಗಿ ಭಯೋತ್ಪಾದಕರನ್ನು, ಎಸ್ಡಿಪಿಐ, ಪಿಎಫ್ಐ ಸಂಘಟನೆಗಳ ಬೆಂಬಲ ಮಾಡುತ್ತಿದ್ದಾರೆ ಎಂದರು.
ಕಾಂಗ್ರೆಸ್ ಶಾಸಕರ ಹತ್ಯೆಗೆ ಯತ್ನ ಮಾಡಿದ ಸಂಘಟನೆಗಳ ಕೇಸ್ ಕ್ಯಾಬಿನೆಟ್ನಲ್ಲಿ ಹಿಂಪಡೆಯುವ ಕೆಲಸ ಕಾಂಗ್ರೆಸ್ ಮಾಡಿದೆ. ಹಿಂದೂಪರ ಸಂಘಟನೆಗಳ ಕಾರ್ಯಕರ್ತರನ್ನು ಕೊಲ್ಲುವ ಕೆಲಸ ಪಿಎಫ್ಐ, ಎಸ್ಡಿಪಿಐ ಮಾಡುತ್ತಿದೆ. ದೇಶ ದ್ರೋಹಿಗಳನ್ನು ಬೆಂಬಲಿಸುವ ಕೆಲಸ ಕಾಂಗ್ರೆಸ್ ನಾಯಕರು ನಡೆಸಿದ್ದಾರೆ. ಹೀಗಾಗಿ ರಾಜ್ಯದಲ್ಲಿ, ದೇಶದಲ್ಲಿ ಕಾಂಗ್ರೆಸ್ ಧೂಳಿಪಟವಾಗಿದೆ. ಈ ಸಂಘಟನೆಗಳ ನಿಷೇಧಕ್ಕೆ ಕೇಂದ್ರ ಗೃಹ ಸಚಿವರಿಗೆ ಈ ಹಿಂದೆ ಮನವಿ ಮಾಡಿದ್ದೇವೆ. ಭಾರತ ಮಾತೆಗೆ ಜೈ ಅನ್ನೋರಿಗೆ ರಕ್ಷಣೆ ಮಾಡ್ತೀವಿ, ಆದರೆ ಪಾಕಿಸ್ತಾನ ಪರ ಜೈ ಅಂದವ್ರಿಗೆ ಕ್ಷಮಿಸುವ ಪ್ರಶ್ನೆಯೇ ಇಲ್ಲ ಎಂದರು.
ಪಾಕಿಸ್ತಾನ ಪರ ಜೈ ಅಂದ್ರೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಸಿಎಂ ಯಡಿಯೂರಪ್ಪ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಚರ್ಚೆ ಮಾಡಿ ನಿಷೇಧಿಸುವ ಬಗ್ಗೆ ನಿರ್ಧಾರ ಮಾಡ್ತಾರೆ. ನಮ್ಮ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಮೊನ್ನೆ ಸಚಿವ ಜಗದೀಶ್ ಶೆಟ್ಟರ್ ಅವರ ಮನೆಯಲ್ಲಿ ಸೇರಿದ್ದು, ಕ್ಷೇತ್ರದ ಅಭಿವೃದ್ಧಿಗಾಗಿ ಮತ್ತು ಬಜೆಟ್ ಕುರಿತು ಚರ್ಚೆ ನಡೆಸಲು ಅದು ಬಿಟ್ಟು ಮಾಧ್ಯಮಗಳಲ್ಲಿ ಬಿತ್ತರವಾದಂತೆ ಯಾವುದೇ ಭಿನ್ನಾಬಿಪ್ರಾಯ ಇಲ್ಲ ಎಂದರು.