ETV Bharat / state

ಬಿಜೆಪಿ ವಿರುದ್ಧ ಗಜೇಂದ್ರಗಡದಲ್ಲಿ ಕಾಂಗ್ರೆಸ್ ಪ್ರತಿಭಟನೆ - Congress protest in Gajendragad against BJP

ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಾಕಷ್ಟು ಅನ್ಯಾಯ, ಅಕ್ರಮ, ಅತ್ಯಾಚಾರ ಪ್ರಕರಣಗಳು ನಡೆಯುತ್ತಿವೆ ಎಂದು ಆರೋಪಿಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗುವ ಮೂಲಕ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
author img

By

Published : Oct 2, 2020, 5:26 PM IST

Updated : Oct 2, 2020, 9:37 PM IST

ಗದಗ: ಬಿಜೆಪಿ ಸರ್ಕಾರ ದುರಾಡಳಿತ ನಡೆಸುತ್ತಿದೆ ಎಂದು ಆರೋಪಿಸಿ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ಪಕ್ಷದ ಗದಗ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ಎಸ್. ಪಾಟೀಲ್ ನೇತೃತ್ವದಲ್ಲಿ ಪಟ್ಟಣದ ಕಾಲಕಾಲೇಶ್ವರ ಸರ್ಕಲ್​ನಿಂದ ತಹಶೀಲ್ದಾರ್​ ಕಚೇರಿವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಲಾಯಿತು.

ಬಿಜೆಪಿ ವಿರುದ್ಧ ಗಜೇಂದ್ರಗಡದಲ್ಲಿ ಕಾಂಗ್ರೆಸ್ ಪ್ರತಿಭಟನೆ

ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಾಕಷ್ಟು ಅನ್ಯಾಯ, ಅಕ್ರಮ, ಅತ್ಯಾಚಾರ ಪ್ರಕರಣಗಳು ನಡೆಯುತ್ತಿವೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಉತ್ತರ ಪ್ರದೇಶದ ಹಥ್ರಾಸ್​​​ ಜಿಲ್ಲೆಯಲ್ಲಿ ದಲಿತ ಮಹಿಳೆ ಮನಿಷಾ ವಾಲ್ಮಿಕಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ಸಾವಿಗೆ ಕಾರಣರಾದವರನ್ನು ಕೂಡಲೇ ಬಂಧಿಸಿ, ಶಿಕ್ಷೆ ವಿಧಿಸುವಂತೆ ಆಗ್ರಹಿಸಿದರು.

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ದೀನದಲಿತರು, ಹಿಂದುಳಿದವರು, ಕೂಲಿಕಾರ್ಮಿಕರು, ಅಮಾಯಕರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಆರೋಪಿಸಿದರು.

Last Updated : Oct 2, 2020, 9:37 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.