ಗದಗ: ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಕೆಲಸಕ್ಕೆ ಬಂದಿದ್ದ ಕಾರ್ಮಿಕ ಕೆಲಸ ಮಾಡುವ ವೇಳೆಯೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಇಟಗಿ ಗ್ರಾಮದಲ್ಲಿ ನಡೆದಿದೆ.
48 ವರ್ಷದ ಮಂಜುನಾಥ ಉದ್ದಾರ ಎಂಬಾತ ಮೃತ ಕಾರ್ಮಿಕ. ಇಟಗಿ ಗ್ರಾಮದ ನಿವಾಸಿಯಾಗಿರುವ ಮಂಜುನಾಥ ಉದ್ದಾರ, ಜಮೀನಿನಲ್ಲಿ ಒಡ್ಡು ನಿರ್ಮಾಣ ಮಾಡುವ ವೇಳೆಯಲ್ಲಿ ಇದ್ದಕ್ಕಿದ್ದಂತೆ ಸ್ಥಳದಲ್ಲೇ ಕುಸಿದು ಸಾವನ್ನಪ್ಪಿದ್ದಾನೆ.
ಇಂದಿನಿಂದ ಇಟಗಿ ಗ್ರಾಮ ಪಂಚಾಯತ್ ವತಿಯಿಂದ ಉದ್ಯೋಗ ಖಾತ್ರಿ ಯೋಜನೆ ಆರಂಭ ಮಾಡಿತ್ತು. ಈ ಹಿನ್ನೆಲೆಯಲ್ಲಿ ಪತ್ನಿ ಪುಷ್ಪಾ ಅವರೊಂದಿಗೆ ಕೆಲಸಕ್ಕೆ ಹಾಜರಾಗಿದ್ದ ಮಂಜುನಾಥ ಪತ್ನಿ ಮತ್ತು ಮಕ್ಕಳನ್ನು ಅಗಲಿದ್ದಾರೆ.