ಗದಗ: ಇಂದು ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ ಒಟ್ಟು ಆರು ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ.
ನಗರದ ಬಾಷಲ್ ಮಿಷನ್ ಪರೀಕ್ಷಾ ಕೇಂದ್ರದಲ್ಲಿ ಎಸ್ಎಸ್ಎಲ್ಸಿ ಗಣಿತ ಪರೀಕ್ಷೆ ನಡೆಯುತ್ತಿತ್ತು. ಈ ವೇಳೆ ಪರೀಕ್ಷಾ ಕೇಂದ್ರಕ್ಕೆ ಧಾರವಾಡ ಶಿಕ್ಷಣ ಇಲಾಖೆ ಆಯುಕ್ತ ಮೇಜರ್ ಸಿದ್ಧಲಿಂಗಯ್ಯ ಹಿರೇಮಠ ದಿಢೀರ್ ಭೇಟಿ ನೀಡಿದ್ದು, ಮೂವರು ವಿದ್ಯಾರ್ಥಿಗಳು ನಕಲು ಮಾಡುವ ವೇಳೆ ಸಿಕ್ಕಿಬಿದ್ದಿದ್ದಾರೆ. ಈ ಮೂವರನ್ನು ಡಿಬಾರ್ ಮಾಡಿ ಆದೇಶ ಹೊರಡಿಸಿದ್ದಾರೆ.
ಎಸ್ಎಸ್ಎಲ್ ಸಿ ಗಣಿತ ಪರೀಕ್ಷೆಯಲ್ಲಿ ನಕಲು: ಮೂವರು ವಿದ್ಯಾರ್ಥಿಗಳು ಡಿಬಾರ್
ಮೂವರು ವಿದ್ಯಾರ್ಥಿಗಳು ಡಿಬಾರ್:
ನಗರದ ಗಾಂಧಿ ಸರ್ಕಲ್ ಬಳಿ ಇರುವ ಮುನ್ಸಿಪಲ್ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಕೂಡಾ ಮೂವರು ವಿದ್ಯಾರ್ಥಿಗಳನ್ನು ಆಯುಕ್ತರು ಡಿಬಾರ್ ಮಾಡಿದ್ದರು. ಈ ಮೂಲಕ ಇಂದು ಒಂದೇ ದಿನ ಒಟ್ಟು 6 ವಿದ್ಯಾರ್ಥಿಗಳು ಡಿಬಾರ್ ಆಗಿದ್ದಾರೆ.