ಗದಗ: ಕೊರೊನಾ ವೈರಸ್ ಹರಡದಂತೆ ತಡೆಯುವ ಹೋರಾಟದ ನಿಟ್ಟಿನಲ್ಲಿ ಪೌರಕಾರ್ಮಿಕರೂ ಸಹ ಶ್ರಮಿಸುತ್ತಿದ್ದಾರೆ. ಪೌರಕಾರ್ಮಿಕರ ಈ ಸೇವೆ ಗುರುತಿಸಿದ ಗದಗದ ಯುವಕರು, ಪೌರಕಾರ್ಮಿಕರಿಗೆ ಸನ್ಮಾನ ಮಾಡಿ ವಿಶೇಷತೆ ಮೆರೆದಿದ್ದಾರೆ.
ಲಾಕ್ಡೌನ್ ಹಿನ್ನೆಲೆ ಎಲ್ಲರೂ ಮನೆಯಲ್ಲಿದ್ರೆ, ಪೌರಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ಸರ್ವೋದಯ ಕಾಲೋನಿಯಲ್ಲಿ ಕೆಲಸ ಮಾಡುತ್ತಿದ್ದ ಪೌರಕಾರ್ಮಿಕರಿಗೆ ಮುತ್ತಿನ ಹಾರವನ್ನು ಹಾಕಿ ಸನ್ಮಾನ ಮಾಡಿದ್ದಾರೆ. ಈ ಮೂಲಕ ಕೊರೊನಾ ತಡೆಗಟ್ಟಲು ಪೌರಕಾರ್ಮಿಕರು ತಮ್ಮದೇಯಾದ ಸೇವೆ ಸಲ್ಲಿಸುತ್ತಿದ್ದಾರೆ. ಹೀಗಾಗಿ ಅವರಿಗೂ ಸಹ ಸಾರ್ವಜನಿಕರು ಸಹಕಾರ ಕೊಡಬೇಕು ಎಂದು ಮನವಿ ಮಾಡಿದ್ದಾರೆ.