ETV Bharat / state

ಬಾಗಲಕೋಟೆಯ 5 ತಿಂಗಳ ಗರ್ಭಿಣಿಗೆ ಕೊರೊನಾ ಸೋಂಕು ದೃಢ! - Corona Latest News

ಬಾಗಲಕೋಟೆ ಜಿಲ್ಲೆಯಿಂದ ಗದಗ ಜಿಲ್ಲೆಯ ರೋಣ ತಾಲೂಕಿನ ಕೃಷ್ಣಾಪುರದ ತವರು ಮನೆಗೆ ಬಂದಿದ್ದ ಗರ್ಭಿಣಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಗ್ರಾಮದಲ್ಲಿ ಆತಂಕ ಮನೆ ಮಾಡಿದೆ.

Coronavirus infection in 5 months pregnant
ಬಾಗಲಕೋಟೆಯ 5 ತಿಂಗಳ ಗರ್ಭಿಣಿಗೆ ಕೊರೊನಾ ಸೋಂಕು ದೃಢ
author img

By

Published : May 3, 2020, 10:39 PM IST

ಗದಗ: ಜಿಲ್ಲೆಯ ರೋಣ ತಾಲೂಕಿನ ಕೃಷ್ಣಾಪುರ ಗ್ರಾಮದ 5 ತಿಂಗಳ ಗರ್ಭಿಣಿ(ರೋಗಿ-607)ಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಆಕೆಯ ಕುಟುಂಬಸ್ಥರನ್ನೂ ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.‌

ಬಾಗಲಕೋಟೆ ಜಿಲ್ಲೆಯಿಂದ ಗದಗ ಜಿಲ್ಲೆಯ ರೋಣ ತಾಲೂಕಿನ ಕೃಷ್ಣಾಪುರದ ತವರು ಮನೆಗೆ ಬಂದಿದ್ದ ಗರ್ಭಿಣಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಗ್ರಾಮದಲ್ಲಿ ಆತಂಕ ಮನೆ ಮಾಡಿದೆ. ಜ್ವರದಿಂದ ಬಳಲುತ್ತಿದ್ದ 25 ವರ್ಷದ ಗರ್ಭಿಣಿಗೆ ರೋಣ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಜ್ವರ ತೀವ್ರವಾದ ಬಳಿಕ ಧಾರವಾಡ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಅಲ್ಲಿ ಗಂಟಲು ದ್ರವ ತಪಾಸಣೆ ಬಳಿಕ ವರದಿ ಪಾಸಿಟಿವ್ ಬಂದಿದೆ.

ಈಕೆ ಪತಿ‌ ಊರು ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಡಾಣಕಶಿರೂರ ಗ್ರಾಮದಿಂದ ತವರು ಮನೆ ರೋಣ ತಾಲೂಕಿನ ಕೃಷ್ಣಾಪುರಕ್ಕೆ ಬಂದಿದ್ದಳು ಎನ್ನಲಾಗಿದೆ. ಇನ್ನು ಗರ್ಭಿಣಿ ಮಹಿಳೆಯ ಕುಟುಂಬ ಸೇರಿ ಪ್ರಾಥಮಿಕ ಸಂಪರ್ಕ ಹೊಂದಿದ 12 ಜನರನ್ನು ಹಾಗೂ ದ್ವೀತಿಯ ಸಂಪರ್ಕ ಹೊಂದಿದ 18 ಜನರನ್ನ ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.