ಗದಗ: ಜಿಲ್ಲೆಯಲ್ಲಿ ಕೊರೊನಾ ವೈರಸ್ ಸ್ಥಿತಿಗತಿ ಕುರಿತು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಮಾಹಿತಿ ಬಿಡುಗಡೆ ಮಾಡಿದ್ದಾರೆ.
ಇದುವರೆಗೆ ಗದಗ ಜಿಲ್ಲೆಯಲ್ಲಿ ತಪಾಸಣೆಗೆ ಒಳಗಾದವರ ಒಟ್ಟು ಸಂಖ್ಯೆ 301(ಹೊಸದಾಗಿ ಒಟ್ಟು 13 ಸೇರಿ) ಇದ್ದು, 99 ಜನ 28 ದಿನಗಳ ನಿಗಾ ಅವಧಿ ಪೂರೈಸಿದ್ದಾರೆ. ಮನೆಯಲ್ಲಿಯೇ ಪ್ರತ್ಯೇಕ ನಿಗಾದಲ್ಲಿರುವವರ ಸಂಖ್ಯೆ 177 ಇದ್ದು, ಸೌಲಭ್ಯದೊಂದಿಗೆ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ನಿಗಾದಲ್ಲಿರುವವರ ಸಂಖ್ಯೆ ಇಂದಿನ 13 ಸೇರಿ 25ಕ್ಕೆ ಏರಿಕೆಯಾಗಿದೆ.
ಇನ್ನು ಪರೀಕ್ಷೆಗಾಗಿ ಸಂಗ್ರಹಿಸಿದ ಒಟ್ಟು ಮಾದರಿಗಳು ಇಂದಿನ 10 ಸೇರಿ 145 ಇವೆ. ಒಟ್ಟು 129 ಮಾದರಿಗಳ ವರದಿ ನೆಗೆಟಿವ್ ಎಂದು ಬಂದಿವೆ. ಇನ್ನೂ 15 ವರದಿಗಳು ಬಾಕಿ ಇದ್ದು, ಸದ್ಯ ಜಿಲ್ಲೆಯಲ್ಲಿ ಮೃತಪಟ್ಟ ವೃದ್ಧೆಯ ಪ್ರಕರಣ ಒಂದು ಕೊವಿಡ್-19 ಎಂದು ಧೃಡಪಟ್ಟಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸ್ಪಷ್ಟಪಡಿಸಿದ್ದಾರೆ.