ಗದಗ: ಕೊರೊನಾದಿಂದ ಇಡೀ ದೇಶವೇ ನಲುಗುತ್ತಿದೆ. ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ದೇಶಾದ್ಯಂತ ಆತಂಕ ಸೃಷ್ಟಿಯಾಗಿದೆ. ಕೊರೊನಾ ತೊಲಗಿಸಲು ಸರ್ಕಾರ, ಅಧಿಕಾರಿಗಳು, ಕೊರೊನಾ ವಾರಿಯರ್ಸ್ಗಳು ಅವಿರತ ಶ್ರಮಿಸುತ್ತಿದ್ದಾರೆ. ಆದರೆ ಇದೆಲ್ಲದರ ನಡುವೆ ಗದಗ ಜಿಲ್ಲೆ ನರಗುಂದ ತಾಲೂಕಿನ ಬನಹಟ್ಟಿ ಗ್ರಾಮದ ಜನರು ಜವಾಬ್ದಾರಿ ಮರೆತು ಓಕುಳಿ ಆಡಿದ್ದಾರೆ.
ಗ್ರಾಮದಲ್ಲಿನ ಹನುಮಂತ ದೇವರ ದೇವಸ್ಥಾನದ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣದ ಹಿನ್ನೆಲೆಯಲ್ಲಿ ಗ್ರಾಮದ ತುಂಬೆಲ್ಲ ಜನರು ಕೊರೊನಾ ಭಯವಿಲ್ಲದೆ ಹನುಮಂತ ದೇವರ ಓಕುಳಿ ಆಡಿದ್ದಾರೆ. ಇದನ್ನು ನೋಡಲು ಜನಸಾಗರವೇ ಅಲ್ಲಿ ನೆರೆದಿತ್ತು. ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಮೈಮರೆತು ಓಕಳಿಯಲ್ಲಿ ಮಿಂದೆದಿದ್ದಾರೆ.
ಜನ ಇಷ್ಟೊಂದು ನಿರ್ಲಕ್ಷ್ಯ ವಹಿಸಿ ಓಕುಳಿ ಆಡಿದರೂ ಗ್ರಾಪಂ ಸದಸ್ಯರು, ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಮಾತ್ರ ನಿರ್ಲಕ್ಷ್ಯ ವಹಿಸಿ, ಮೌನದಿಂದ ಕುಳಿತಿದೆ. ಅಧಿಕಾರಿಗಳ ಈ ನಡೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಇದನ್ನೂ ಓದಿ: ದೊಡ್ಡಬಳ್ಳಾಪುರ: ಪಿಎಸ್ಐ ವೆಂಕಟೇಶ್ ಕುಟುಂಬದ ನಾಲ್ವರು ಕೊರೊನಾಗೆ ಬಲಿ!