ETV Bharat / state

ನರಗುಂದ ಗಲಾಟೆ ಪ್ರಕರಣ‌.. ಸಿಪಿಐ ನಂದೇಶ್ವರ ಕುಂಬಾರ್ ಅಮಾನತು

ಗದಗ ಜಿಲ್ಲೆ ನರಗುಂದ ಪಟ್ಟಣದಲ್ಲಿ ನಡೆದಿದ್ದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನರಗುಂದ ಸಿಪಿಐ ನಂದೇಶ್ವರ ಕುಂಬಾರ್ ಅವರನ್ನು ಅಮಾನತು ಮಾಡಲಾಗಿದೆ..

author img

By

Published : Jan 30, 2022, 1:45 PM IST

CPI Nandeswara Kumbara suspended
ಸಿಪಿಐ ನಂದೇಶ್ವರ ಕುಂಬಾರ ಅಮಾನತು

ಗದಗ : ನರಗುಂದದಲ್ಲಿ ನಡೆದ ಎರಡು ಕೋಮುಗಳ ನಡುವಿನ ಗಲಾಟೆಗೆ ಸಂಬಂಧಿಸಿದಂತೆ ನರಗುಂದ ಸಿಪಿಐ ನಂದೇಶ್ವರ ಕುಂಬಾರ್ ಅವರನ್ನು ಅಮಾನತು ಮಾಡಿ ಬೆಳಗಾವಿ ಉತ್ತರ ವಲಯ ಐಜಿಪಿ ಎನ್ ಸತೀಶ್‌ಕುಮಾರ್ ಆದೇಶ ಹೊರಡಿಸಿದ್ದಾರೆ.

ಗದಗ ಜಿಲ್ಲೆ ನರಗುಂದ ಪಟ್ಟಣದಲ್ಲಿ ನಡೆದಿದ್ದ ಗಲಾಟೆಯಲ್ಲಿ ಇಬ್ಬರು ಯುವಕರಿಗೆ ಚಾಕು ಇರಿತವಾಗಿತ್ತು. ಜನವರಿ 17ರಂದು ನಡೆದ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಮೀರ್ ಶಹಾಪುರ ಎಂಬಾತ ಕೊಲೆಯಾಗಿದ್ದ. ಇನ್ನೋರ್ವ ಶಮ್ ಶೇರ್ ಖಾನ್ ಎಂಬಾತನಿಗೆ ಗಂಭೀರ ಗಾಯವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ.

ಇದನ್ನೂ ಓದಿ: ನರಗುಂದ ಕೊಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

ಘಟನೆ ಬಳಿಕ ಈ ಸಂಬಂಧ ನಾಲ್ವರು ಆರೋಪಿಗಳನ್ನ ಬಂಧನ ಮಾಡಲಾಗಿತ್ತು. ಪೊಲೀಸ್ ವೈಫಲ್ಯದ ಹಿನ್ನೆಲೆಯಲ್ಲಿ ಗಲಾಟೆ ನಡೆದಿತ್ತು ಅನ್ನೋ ಆರೋಪಗಳು ಕೇಳಿ ಬಂದಿದ್ದವು. ಈ ಹಿಂದೆ ಎರಡು ಸಮುದಾಯದ ನಡುವೆ ಗಲಾಟೆಗಳು ನಡೆದಿದ್ದವು. ಕೊನೆಗೆ ಓರ್ವ ಯುವಕನ ಕೊಲೆಯಾಗಿ ಪಟ್ಟಣದಲ್ಲಿ ಕಾನೂನು ಸುವ್ಯವಸ್ಥೆ ಮತ್ತಷ್ಟು ಹದಗೆಟ್ಟಿತು. ಹೀಗಾಗಿ, ಈ ಘಟನೆ ಪೊಲೀಸರ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿತ್ತು.

ಇಲ್ಲೊಮ್ಮೆ ನೋಡಿ - ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.