ETV Bharat / state

ತುಂಗಭದ್ರೆ ಒಡಲು ಬಗೆದು ಅಕ್ರಮ ಮರಳು ಸಂಗ್ರಹಣೆ : ಡಿಸಿ ನೇತೃತ್ವದಲ್ಲಿ ದಾಳಿ - ಅಕ್ರಮ ಮರಳು ದಂಧೆ ಅಡ್ಡ ಮೇಲೆ ಡಿಸಿ ದಾಳಿ

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಅಧಿಕೃತವಾಗಿ ಪರವಾನಿಗೆ ಪಡೆದ ಮರಳು ಬ್ಲಾಕ್​ಗಳು ಇದ್ದಾಗಲೂ ಸಹ, ಶಿಂಗಟಾಲೂರ ಮತ್ತು ಸುತ್ತಮುತ್ತಲಿನ ಗ್ರಾಮದ ಕೆಲ ಖದೀಮರು ರಾಜಾರೋಷವಾಗಿ ತುಂಗಭದ್ರೆಯ ಒಡಲು ಬಗೆದು ಅಪಾರ ಪ್ರಮಾಣದಲ್ಲಿ ಮರಳು ಸಂಗ್ರಹ ಮಾಡಿದ್ದರು..

gadag
gadag
author img

By

Published : Jun 15, 2021, 5:32 PM IST

ಗದಗ : ಅಕ್ರಮವಾಗಿ ಸಂಗ್ರಹಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಮರಳು ಅಡ್ಡೆಗಳ ಮೇಲೆ ಜಿಲ್ಲಾಧಿಕಾರಿ ದಾಳಿ ನಡೆಸಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಶಿಂಗಟಾಲೂರು ಗ್ರಾಮದಲ್ಲಿ ನಡೆದಿದೆ. ತಾಲೂಕಿನ ತುಂಗಭದ್ರಾ ದಡದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಮರಳು ಅಡ್ಡೆಗಳ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು, ಅಪಾರ ಪ್ರಮಾಣದ ಮೌಲ್ಯದ ಮರಳು ವಶಪಡಿಸಿಕೊಂಡಿದ್ದಾರೆ.

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಅಧಿಕೃತವಾಗಿ ಪರವಾನಿಗೆ ಪಡೆದ ಮರಳು ಬ್ಲಾಕ್​ಗಳು ಇದ್ದಾಗಲೂ ಸಹ, ಶಿಂಗಟಾಲೂರ ಮತ್ತು ಸುತ್ತಮುತ್ತಲಿನ ಗ್ರಾಮದ ಕೆಲ ಖದೀಮರು ರಾಜಾರೋಷವಾಗಿ ತುಂಗಭದ್ರೆಯ ಒಡಲು ಬಗೆದು ಅಪಾರ ಪ್ರಮಾಣದಲ್ಲಿ ಮರಳು ಸಂಗ್ರಹ ಮಾಡಿದ್ದರು.

ಈ ಬಗ್ಗೆ ಮಾಹಿತಿ ಆಧರಿಸಿದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ರಾಜೇಶ್, ಉಪ ವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ತಹಶೀಲ್ದಾರ್ ಆಶಪ್ಪ ಪೂಜಾರ ಹಾಗೂ ಪೊಲೀಸ್ ಇಲಾಖೆಯ 50ಕ್ಕೂ ಹೆಚ್ಚು ಸಿಬ್ಬಂದಿ ಸಹಯೋಗದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ, ಶಿಂಗಟಾಲೂರ ಗ್ರಾಮದ ವ್ಯಾಪ್ತಿಯ ಹಲವು ಕಡೆಗಳಲ್ಲಿ ದಾಳಿ ನಡೆಸಿ, ಸುಮಾರು 100 ಟಿಪ್ಪರ್ ಮರಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಜಿಲ್ಲಾಧಿಕಾರಿ ಸುಂದರೇಶ ಬಾಬು ಎಂ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ಸಹ ದಾಳಿ ನಡೆದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.