ಹಾವೇರಿ: ಹಾನಗಲ್ ತಾಲೂಕಿನ ಮಾರಂಬೀಡ ಕ್ರಾಸ್ ಬಳಿ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಮೃತಪಟ್ಟಿದ್ದಾರೆ.
ಗದಗ ತಾಲೂಕಿನ ಚಿಂಚಲಿ ಗ್ರಾಮದ ನಿವಾಸಿಗಳಾದ ಬಸವರಾಜ ಬಂಡಿವಡ್ಡರ (45), ಬಸವರಾಜ ಹೊಸೂರ (50) ಮೃತಪಟ್ಟ ದುರ್ದೈವಿಗಳಾಗಿದ್ದಾರೆ.
ಸುರೇಶ ಹೊಸೂರ ಎಂಬುವವರಿಗೆ ಗಂಭೀರ ಗಾಯವಾಗಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪಿಎಸ್ಐ ಗುರುರಾಜ ಮೈಲಾರ ಅಪಘಾತ ನಡೆದ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ಕೈಗೊಂಡಿದ್ದಾರೆ. ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.