ETV Bharat / state

ಹಿಂದೂ-ಮುಸ್ಲಿಂ ಭಾವೈಕ್ಯತೆಯ ಶ್ರೀ ಫಕ್ಕೀರೇಶ್ವರ ಮಠಕ್ಕೆ ಉತ್ತರಾಧಿಕಾರಿ ನೇಮಕ.. - successor appointed to Sri Fakkireshwara Math

ಉತ್ತರಾಧಿಕಾರಿಯಾಗಿ ನೇಮಕವಾದ ಬಳಿಕ ಬಾಲೆಹೊಸರು ದಿಂಗಾಲೇಶ್ವರ ಸ್ವಾಮೀಜಿಗಳು, ಶ್ರೀ ಮಠದ ಪರಂಪರೆಯಂತೆ ಇನ್ನು ಮುಂದೆ ಶ್ರೀ ಫಕ್ಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು ಎಂದು ನಾಮಕರಣ ಮಾಡಲಾಯಿತು. ಈಗಿರುವ ಪಟ್ಟಾಧ್ಯರಾದ ಶ್ರೀ ಸಿದ್ದರಾಮ ಮಹಾಸ್ವಾಮಿಗಳು ಹಿರಿಯ ಶ್ರೀಗಳಾಗಿ, ಉತ್ತರಾಧಿಕಾರಿಯಾಗಿ ನೇಮಕವಾದ ಶ್ರೀ ಫಕ್ಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು ಕಿರಿಯ ಶ್ರೀಗಳಾಗಿ ಕಾರ್ಯ ನಿರ್ವಹಣೆ ಮಾಡಲಿದ್ದಾರೆ‌..

dingaleshwara-swamiji
ದಿಂಗಾಲೇಶ್ವರ ಸ್ವಾಮೀಜಿ
author img

By

Published : Feb 4, 2022, 6:02 PM IST

Updated : Feb 4, 2022, 9:26 PM IST

ಗದಗ : ಬಾಳೆಹೊಸೂರು ಮಠದ ಶ್ರೀ ದಿಂಗಾಲೇಶ್ವರ ಸ್ವಾಮೀಜಿಗಳು, ಶಿರಹಟ್ಟಿಯ ಶ್ರೀ ಜಗದ್ಗುರು ಫಕ್ಕೀರೇಶ್ವರ ಮಠಕ್ಕೆ ಉತ್ತರಾಧಿಕಾರಿಯಾಗಿ ನೇಮಕವಾದರು. ಅಪಾರ ಭಕ್ತರು ಹಾಗೂ ವಿವಿಧ ಸ್ವಾಮೀಜಿಗಳ ನೇತೃತ್ವದಲ್ಲಿ ಸಂಪ್ರದಾಯ ಬದ್ಧವಾಗಿ ಉತ್ತರಾಧಿಕಾರಿ ನೇಮಕ ಮಾಡಲಾಯಿತು.

ಪಟ್ಟಾಧ್ಯಕ್ಷರಾದ ಶ್ರೀ ಫಕ್ಕೀರೇಶ್ವರ ಸಿದ್ದರಾಮ ಮಹಾಸ್ವಾಮಿಗಳು ಕರ್ತೃ ಗದ್ದುಗೆ ಪ್ರೇರಣೆಯಂತೆ ಅವರನ್ನು ನೇಮಕ ಮಾಡಲಾಗಿದೆ. ಕಳೆದ ಎರಡು ತಿಂಗಳಿಂದ ಉತ್ತರಾಧಿಕಾರಿಯಾಗಿ ದಿಂಗಾಲೇಶ್ವರ ಶ್ರೀಗಳನ್ನು ಮಾಡುವಂತೆ ಕರ್ತೃ ಗದ್ದುಗೆ ಪ್ರೇರಣೆ ಆಗುತ್ತಿತ್ತು.

ಹಾಗಾಗಿ, ಬಾಲೆಹೊಸರು ಗ್ರಾಮದ ಭಕ್ತರು ಹಾಗೂ ಶಿರಹಟ್ಟಿ ಫಕ್ಕೀರೇಶ್ವರ ಮಠದ ಭಕ್ತರ ಸಮ್ಮುಖದಲ್ಲಿ ಇಂದು ಉತ್ತರಾಧಿಕಾರಿಯಾಗಿ ನೇಮಕ ಮಾಡಿ ಘೋಷಣೆ ಮಾಡಿದ್ದಾರೆ.

ಶ್ರೀ ಫಕ್ಕೀರೇಶ್ವರ ಸಿದ್ದರಾಮ ಮಹಾಸ್ವಾಮಿಗಳು ಮಾತನಾಡಿದರು

ಉತ್ತರಾಧಿಕಾರಿಯಾಗಿ ನೇಮಕವಾದ ಬಳಿಕ ಬಾಲೆಹೊಸರು ದಿಂಗಾಲೇಶ್ವರ ಸ್ವಾಮೀಜಿಗಳು, ಶ್ರೀ ಮಠದ ಪರಂಪರೆಯಂತೆ ಇನ್ನು ಮುಂದೆ ಶ್ರೀ ಫಕ್ಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು ಎಂದು ನಾಮಕರಣ ಮಾಡಲಾಯಿತು. ಈಗಿರುವ ಪಟ್ಟಾಧ್ಯರಾದ ಶ್ರೀ ಸಿದ್ದರಾಮ ಮಹಾಸ್ವಾಮಿಗಳು ಹಿರಿಯ ಶ್ರೀಗಳಾಗಿ, ಉತ್ತರಾಧಿಕಾರಿಯಾಗಿ ನೇಮಕವಾದ ಶ್ರೀ ಫಕ್ಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು ಕಿರಿಯ ಶ್ರೀಗಳಾಗಿ ಕಾರ್ಯ ನಿರ್ವಹಣೆ ಮಾಡಲಿದ್ದಾರೆ‌.

ಅಂದ ಹಾಗೆ ಶಿರಹಟ್ಟಿ ಫಕ್ಕೀರೇಶ್ವರ ಮಠದ ಸಂಪ್ರದಾಯ ಕೂಡ ಬಹಳ ವಿಭಿನ್ನವಾಗಿವೆ. ಶಿರಹಟ್ಟಿ ಫಕ್ಕೀರೇಶ್ವರ ಮಠಕ್ಕೆ ಗತವೈಭವವನ್ನು ಸಾರುವುದರ ಮೂಲಕ ದೇಶದಲ್ಲಿಯೇ ಹಿಂದೂ-ಮುಸ್ಲಿಂ ಸಂಪ್ರದಾಯವನ್ನು ಶತ ಶತಮಾನಗಳಿಂದ ಅಳವಡಿಸಿಕೊಂಡು ಇಂದಿಗೂ ಸಹ ಮಠದ ಪ್ರತಿ ಆಚರಣೆಯೂ ದಿನ ನಿತ್ಯ ನಡೆದುಕೊಂಡು ಬರುತ್ತಿವೆ.

ಹೀಗಾಗಿ, ಫಕ್ಕೀರೇಶ್ವರ ಮಠದ ಸಂಪ್ರದಾಯವನ್ನು ಮುಂದುವರೆಸಿಕೊಂಡು ಹೋಗುತ್ತೇನೆ ಎಂದು ನೂತನ ಉತ್ತರಾಧಿಕಾರಿ ಶ್ರೀ ಫಕ್ಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು ಹೇಳಿದ್ದಾರೆ.

ಶ್ರೀಫಕ್ಕೀರೇಶ್ವರ ಮಠದ ಸುಮಾರು 60 ಶಾಖಾ ಮಠಗಳು ಹಾಗೂ ಹತ್ತಾರು ಶಿಕ್ಷಣ ಸಂಸ್ಥೆಗಳನ್ನು ಮುನ್ನಡೆಸುವ ಜವಾಬ್ದಾರಿ ನೂತನ ಉತ್ತರಾಧಿಕಾರಿಗಳ ಮೇಲೆ ಇದೆ. ಹಿಂದೂ- ಮುಸ್ಲಿಂ ಭಾವೈಕ್ಯತೆಯತೆಯನ್ನು ಎತ್ತಿ ಹಿಡಿದು ಸಂಪ್ರದಾಯದಂತೆ ಮಠವನ್ನು ಮುನ್ನಡೆಸುತ್ತಾರೆ ಎನ್ನುವ ಅಭಿಲಾಷೆ ಭಕ್ತರಲ್ಲಿದೆ. ಶ್ರೀ ಫಕ್ಕೀರೇಶ್ವರ ಕರ್ತೃ ಗದ್ದುಗೆ ಪ್ರೇರಣೆಯಂತೆ ಉತ್ತರಾಧಿಕಾರಿ ನೇಮಕವಾಗಿದ್ದು, ಭಕ್ತರಲ್ಲಿ ಸಂತಸ ಮೂಡಿಸಿದೆ.

ಓದಿ: ಹಿಜಾಬ್, ಶಾಲು ಹಾಕೊಂಡ್​ ಬಂದ್ರೆ ನೋ ಎಂಟ್ರಿ.. ಕೋರ್ಟ್ ತೀರ್ಪು ಬರೋವರೆಗೂ ಸಮವಸ್ತ್ರ ಧರಿಸಿಯೇ ಬರಬೇಕು: ಶಿಕ್ಷಣ ಸಚಿವ

Last Updated : Feb 4, 2022, 9:26 PM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.